ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರ ವರೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ದಕ್ಷಿಣ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 30-24
ಶಿವಮೊಗ್ಗ: 29-21
ಬೆಳಗಾವಿ: 27-20
ಮೈಸೂರು: 27-19
ಮಂಡ್ಯ: 28-21
ಮಡಿಕೇರಿ: 24-17
ರಾಮನಗರ: 29-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-19
ಕೋಲಾರ: 28-20
ತುಮಕೂರು: 28-20
ಉಡುಪಿ: 30-24
ಕಾರವಾರ: 30-25
ಚಿಕ್ಕಮಗಳೂರು: 26-18
ದಾವಣಗೆರೆ: 29-21
ಚಿತ್ರದುರ್ಗ: 29-21
ಹಾವೇರಿ: 29-21
ಬಳ್ಳಾರಿ: 31-22
ಗದಗ: 28-21
ಕೊಪ್ಪಳ: 29-22
ರಾಯಚೂರು: 31-22
ಯಾದಗಿರಿ: 31-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 30-22
ಬಾಗಲಕೋಟೆ: 29-22