ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Advertisement
ಕರಾವಳಿ ಭಾಗದಲ್ಲಿ ಮೇ 18 ಕ್ಕೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಮೇ 18 ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 17ಕ್ಕೆ ಆರೆಂಜ್ ಅಲರ್ಟ್ ಮತ್ತು ಮೇ 19 ರಿಂದ 21 ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯಿಂದ 21 ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
Advertisement
Advertisement
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 25-20
ಮಂಗಳೂರು: 28-25
ಶಿವಮೊಗ್ಗ: 26-22
ಬೆಳಗಾವಿ: 30-22
ಮೈಸೂರು: 24-20
ಮಂಡ್ಯ: 25-21
ಕೊಡಗು: 21-17
ರಾಮನಗರ: 25-21
ಹಾಸನ: 23-19
ಚಾಮರಾಜನಗರ: 25-21
ಚಿಕ್ಕಬಳ್ಳಾಪುರ: 26-20
ಕೋಲಾರ: 27-21
ತುಮಕೂರು: 24-21
ಉಡುಪಿ: 28-26
ಕಾರವಾರ: 31-27
ಚಿಕ್ಕಮಗಳೂರು: 23-19
ದಾವಣಗೆರೆ: 27-22
ಚಿತ್ರದುರ್ಗ: 26-21
ಹಾವೇರಿ: 28-23
ಬಳ್ಳಾರಿ: 31-23
ಗದಗ: 31-23
ಕೊಪ್ಪಳ: 31-23
ರಾಯಚೂರು: 34-25
ಯಾದಗಿರಿ: 34-26
ವಿಜಯಪುರ: 35-25
ಬೀದರ್: 36-25
ಕಲಬುರಗಿ: 36-27
ಬಾಗಲಕೋಟೆ: 33-24