ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಸಿಂಚನವಾಗಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳಲ್ಲಿ 30-40 ಕಿಲೋಮೀಟರ್ ವೇಗದ ಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 40-50 ಕಿಮೀ ವೇಗದ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯ ಕೆಲ ಸ್ಥಳಗಳಲ್ಲಿ 40-50 ಕಿಲೋಮೀಟರ್ ವೇಗದ ಗಾಳಿ ಸಹಿತ ಹಗುರ ಮಳೆ ನಿರೀಕ್ಷಿಸಲಾಗಿದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 26-24
ಶಿವಮೊಗ್ಗ: 27-22
ಬೆಳಗಾವಿ: 24-22
ಮೈಸೂರು: 28-22

ಮಂಡ್ಯ: 29-22
ಮಡಿಕೇರಿ: 23-21
ರಾಮನಗರ: 29-22
ಹಾಸನ: 25-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21

ಕೋಲಾರ: 29-22
ತುಮಕೂರು: 28-21
ಉಡುಪಿ: 26-24
ಕಾರವಾರ: 27-26
ಚಿಕ್ಕಮಗಳೂರು: 23-19
ದಾವಣಗೆರೆ: 29-23

ಹುಬ್ಬಳ್ಳಿ: 27-22
ಚಿತ್ರದುರ್ಗ: 28-22
ಹಾವೇರಿ: 27-23
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 29-23

ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 30-24
ಕಲಬುರಗಿ: 30-24
ಬಾಗಲಕೋಟೆ: 30-24
