ಬಿಪರ್ಜಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಒಂದು ಸೆಂಟಿ ಮೀಟರ್ನಷ್ಟು ಮಳೆಯಾಗಿತ್ತು. ಪ್ರತ್ಯೇಕವಾಗಿ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರಮಟ್ಟದಿಂದ ಕೇರಳ ಹಾಗೂ ಕರಾವಳಿ ಭಾಗದಲ್ಲಿ ಟ್ರಫ್ ಉಂಟಾದ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಐದನೇ ದಿನಕ್ಕೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 24ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 30-26
ಶಿವಮೊಗ್ಗ: 31-23
ಬೆಳಗಾವಿ: 32-22
ಮೈಸೂರು: 29-21
Advertisement
ಮಂಡ್ಯ: 30-22
ಮಡಿಕೇರಿ: 23-18
ರಾಮನಗರ: 29-22
ಹಾಸನ: 27-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-22
ತುಮಕೂರು: 29-21
ಉಡುಪಿ: 30-26
ಕಾರವಾರ: 32-27
ಚಿಕ್ಕಮಗಳೂರು: 26-19
ದಾವಣಗೆರೆ: 34-23
ಹುಬ್ಬಳ್ಳಿ: 35-23
ಚಿತ್ರದುರ್ಗ: 33-22
ಹಾವೇರಿ: 34-23
ಬಳ್ಳಾರಿ: 37-26
ಗದಗ: 36-23
ಕೊಪ್ಪಳ: 36-24
ರಾಯಚೂರು: 38-27
ಯಾದಗಿರಿ: 39-28
ವಿಜಯಪುರ: 38-24
ಬೀದರ್: 37-27
ಕಲಬುರಗಿ: 39-27
ಬಾಗಲಕೋಟೆ: 38-24