ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಯ ಪರಿಣಾಮ ರಾಜ್ಯದಲ್ಲಿ ಮಳೆ ಚುರುಕಾಗಿದೆ.
ನಾಳೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ನಾಳೆ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರದಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 31-23
ಶಿವಮೊಗ್ಗ: 30-22
ಬೆಳಗಾವಿ: 31-20
ಮೈಸೂರು: 31-21

ಮಂಡ್ಯ: 30-22
ಮಡಿಕೇರಿ: 26-20
ರಾಮನಗರ: 30-21
ಹಾಸನ: 28-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-21

ಕೋಲಾರ: 28-21
ತುಮಕೂರು: 29-21
ಉಡುಪಿ: 30-24
ಕಾರವಾರ: 34-23
ಚಿಕ್ಕಮಗಳೂರು: 28-21

ದಾವಣಗೆರೆ: 30-23
ಹುಬ್ಬಳ್ಳಿ: 30-22
ಚಿತ್ರದುರ್ಗ: 32-22
ಹಾವೇರಿ: 30-22
ಬಳ್ಳಾರಿ: 29-23
ಗದಗ: 30-22
ಕೊಪ್ಪಳ: 31-23

ರಾಯಚೂರು: 29-23
ಯಾದಗಿರಿ: 30-23
ವಿಜಯಪುರ: 28-23
ಕಲಬುರಗಿ: 30-23
ಬಾಗಲಕೋಟೆ: 30-22

