ಕಳೆದ ಎರಡು ವಾರಗಳಿಂದ ಬಿಡುವು ನೀಡಿದ್ದ ಮಳೆ ಇದೀಗ, ಮತ್ತೆ ರಾಜ್ಯದಲ್ಲಿ ಮುಂದುವರಿಯಲಿದೆ. ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
Advertisement
Advertisement
ಆ.23, 24, 25 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದ್ದು ಈಗಾಗಲೇ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಅಲ್ಲದೇ ಆ. 24ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 27-24
ಶಿವಮೊಗ್ಗ: 27-21
ಬೆಳಗಾವಿ: 25-20
ಮೈಸೂರು: 27-20
ಮಂಡ್ಯ: 28-21
ಕೊಡಗು: 21-17
ರಾಮನಗರ: 28-20
ಹಾಸನ: 25-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 28-20
ಉಡುಪಿ: 27-24
ಚಿಕ್ಕಮಗಳೂರು: 24-18
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 28-21
ಬಳ್ಳಾರಿ: 32-23
ಗದಗ: 29-21
ಕೊಪ್ಪಳ: 30-22
ರಾಯಚೂರು: 33-23
ಯಾದಗಿರಿ: 32-23
ವಿಜಯಪುರ: 31-22
ಬೀದರ್: 29-21
ಕಲಬುರಗಿ: 31-22
ಬಾಗಲಕೋಟೆ: 31-22