ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂದಿನ ಮೂರು ದಿನವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲೂ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 31-22
ಮಂಗಳೂರು: 31-26
ಶಿವಮೊಗ್ಗ: 31-23
ಬೆಳಗಾವಿ: 30-23
ಮೈಸೂರು: 32-22

ಮಂಡ್ಯ: 32-22
ಮಡಿಕೇರಿ: 27-21
ರಾಮನಗರ: 32-22
ಹಾಸನ: 29-22
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 31-22

ಕೋಲಾರ: 32-22
ತುಮಕೂರು: 31-22
ಉಡುಪಿ: 32-27
ಕಾರವಾರ: 31-29
ಚಿಕ್ಕಮಗಳೂರು: 27-21
ದಾವಣಗೆರೆ: 32-24

ಹುಬ್ಬಳ್ಳಿ: 31-24
ಚಿತ್ರದುರ್ಗ: 31-23
ಹಾವೇರಿ: 31-24
ಬಳ್ಳಾರಿ: 34-26
ಗದಗ: 31-23
ಕೊಪ್ಪಳ: 33-25

ರಾಯಚೂರು: 37-27
ಯಾದಗಿರಿ: 37-27
ವಿಜಯಪುರ: 36-26
ಕಲಬುರಗಿ: 37-27
ಬಾಗಲಕೋಟೆ: 35-25
