ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-22
ಮಂಗಳೂರು: 27-25
ಶಿವಮೊಗ್ಗ: 26-23
ಬೆಳಗಾವಿ: 27-22
ಮೈಸೂರು: 27-22

ಮಂಡ್ಯ: 28-22
ಮಡಿಕೇರಿ: 22-21
ರಾಮನಗರ: 28-22
ಹಾಸನ: 25-21
ಚಾಮರಾಜನಗರ: 28-23
ಚಿಕ್ಕಬಳ್ಳಾಪುರ: 28-21

ಕೋಲಾರ: 28-22
ತುಮಕೂರು: 28-22
ಉಡುಪಿ: 27-25
ಕಾರವಾರ: 28-27
ಚಿಕ್ಕಮಗಳೂರು: 22-19

ದಾವಣಗೆರೆ: 29-23
ಹುಬ್ಬಳ್ಳಿ: 28-23
ಚಿತ್ರದುರ್ಗ: 28-23
ಹಾವೇರಿ: 28-23
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 31-23

ರಾಯಚೂರು: 33-25
ಯಾದಗಿರಿ: 33-25
ವಿಜಯಪುರ: 32-24
ಕಲಬುರಗಿ: 31-24
ಬಾಗಲಕೋಟೆ: 31-23

