ರಾಜ್ಯದಲ್ಲಿ ಮೈ ಕೊರೆವ ಚಳಿಯ ನಡುವೆ ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದ್ದು, ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಯಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 31-25
ಶಿವಮೊಗ್ಗ: 30-22
ಬೆಳಗಾವಿ: 30 -21
ಮೈಸೂರು: 28-22
ಮಂಡ್ಯ: 29-22
ಮಡಿಕೇರಿ: 27-21
ರಾಮನಗರ: 28-22
ಹಾಸನ: 27-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 27-21
ಕೋಲಾರ: 27-21
ತುಮಕೂರು: 28-21
ಉಡುಪಿ: 31-26
ಕಾರವಾರ: 31-27
ಚಿಕ್ಕಮಗಳೂರು: 25-19
ದಾವಣಗೆರೆ: 32-23
ಹುಬ್ಬಳ್ಳಿ: 32-22
ಚಿತ್ರದುರ್ಗ: 30-22
ಹಾವೇರಿ: 32-23
ಬಳ್ಳಾರಿ: 32-23
ಗದಗ: 31-22
ಕೊಪ್ಪಳ: 32-23
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 27-21
ಕಲಬುರಗಿ: 31-22
ಬಾಗಲಕೋಟೆ: 32-23






