ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಕರಾವಳಿ ಹಾಗೂ ಮಲೆನಾಡು ಭಾಗದ 6 ಜಿಲ್ಲೆಗಳಿಗೆ ಇಂದಿನಿಂದ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಮುಂದಿನ 4 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಸೆಲ್ಸಿಯಸ್ ಹಾಗೂ ಕನಿಷ್ಠ 20 ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 30-22
ಮಂಗಳೂರು: 32-25
ಶಿವಮೊಗ್ಗ: 31-22
ಬೆಳಗಾವಿ: 30-21
ಮೈಸೂರು: 31-22

ಮಂಡ್ಯ: 32-23
ಮಡಿಕೇರಿ: 27-20
ರಾಮನಗರ: 31-22
ಹಾಸನ: 28-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 30-22

ಕೋಲಾರ: 31-22
ತುಮಕೂರು: 31-22
ಉಡುಪಿ: 31-25
ಕಾರವಾರ: 30-27
ಚಿಕ್ಕಮಗಳೂರು: 26-19

ದಾವಣಗೆರೆ: 32-23
ಹುಬ್ಬಳ್ಳಿ: 31-22
ಚಿತ್ರದುರ್ಗ: 31-22
ಹಾವೇರಿ: 32-22
ಬಳ್ಳಾರಿ: 33-24
ಗದಗ: 32-23
ಕೊಪ್ಪಳ: 32-24

ರಾಯಚೂರು: 34-25
ಯಾದಗಿರಿ: 34-25
ವಿಜಯಪುರ: 33-24
ಕಲಬುರಗಿ: 34-24
ಬಾಗಲಕೋಟೆ: 33-24

