ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು ಮತ್ತು ನಿರಂತರ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆ ಆಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
Advertisement
ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಲಘು, ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಡೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 26-21
ಮೈಸೂರು: 28-21
ಮಂಡ್ಯ: 28-22
ಮಡಿಕೇರಿ: 21-17
ರಾಮನಗರ: 28-22
ಹಾಸನ: 25-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 28-21
ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-19
ದಾವಣಗೆರೆ: 28-22
ಹುಬ್ಬಳ್ಳಿ: 27-21
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-23
ಗದಗ: 28-22
ಕೊಪ್ಪಳ: 30-23
ರಾಯಚೂರು: 31-23
ಯಾದಗಿರಿ: 32-24
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 31-23