ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ ಮುಂದುವರಿದಿದೆ. ಇದೀಗ ಮತ್ತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಅಲರ್ಟ್ ನೀಡಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಹೊರತುಪಡಿಸಿ, ರಾಜ್ಯಾದ್ಯಂತ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 29-24
ಶಿವಮೊಗ್ಗ: 26-21
ಬೆಳಗಾವಿ: 26-21
ಮೈಸೂರು: 29-21
ಮಂಡ್ಯ: 29-21
ಮಡಿಕೇರಿ: 22-16
ರಾಮನಗರ: 28-21
ಹಾಸನ: 26-19
ಚಾಮರಾಜನಗರ: 30-21
ಚಿಕ್ಕಬಳ್ಳಾಪುರ: 24-19
ಕೋಲಾರ: 27-20
ತುಮಕೂರು: 26-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 24-18
ದಾವಣಗೆರೆ: 26-21
ಚಿತ್ರದುರ್ಗ: 25-20
ಹಾವೇರಿ: 27-21
ಬಳ್ಳಾರಿ: 27-22
ಗದಗ: 27-21
ಕೊಪ್ಪಳ: 27-22
ರಾಯಚೂರು: 27-22
ಯಾದಗಿರಿ: 29-22
ವಿಜಯಪುರ: 29-22
ಬೀದರ್: 28-21
ಕಲಬುರಗಿ: 29-22
ಬಾಗಲಕೋಟೆ: 28-22