ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ವಿಶೇಷವಾಗಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಸೇರಿದಂತೆ ಘಟ್ಟದ ಕೆಳಭಾಗಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ನಿರೀಕ್ಷೆಯಿದೆ. ಪ್ರಸ್ತುತ ಹವಾಮಾನ ಅಂದಾಜಿನ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರವರೆಗೂ ಇದೇ ರೀತಿಯ ವಾತಾವರಣ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆದರೆ ಸೆಪ್ಟೆಂಬರ್ 2 ಮತ್ತು 3ರಂದು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳನಾಡಿನ ಗದಗ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ಸೆಪ್ಟೆಂಬರ್ 3ರ ಬಳಿಕ ಉತ್ತರ ಕನ್ನಡ ಮತ್ತು ಶಿವಮೊಗ್ಗಕ್ಕೆ ಹೊಂದಿಕೊಂಡಿರುವ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆ ಚುರುಕಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಹಾಗೂ ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 30-24
ಶಿವಮೊಗ್ಗ: 28-22
ಬೆಳಗಾವಿ: 26-21
ಮೈಸೂರು: 31-21

ಮಂಡ್ಯ: 32-21
ಮಡಿಕೇರಿ: 26-20
ರಾಮನಗರ: 31-21
ಹಾಸನ: 27-19
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 29-20

ಕೋಲಾರ: 30-21
ತುಮಕೂರು: 29-20
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 24-18

ದಾವಣಗೆರೆ: 30-22
ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 29-22
ಬಳ್ಳಾರಿ: 33-23
ಗದಗ: 29-22
ಕೊಪ್ಪಳ: 32-23

ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 32-23
ಕಲಬುರಗಿ: 32-23
ಬಾಗಲಕೋಟೆ: 31-23
