ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಅಕ್ಟೋಬರ್ 22ರಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆ ಭಾರಿ ಮಳೆಯಾಗಬಹುದು. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಮುಂದಿನ ಕೆಲವು ದಿನಗಳಲ್ಲೂ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮೈಸೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 31-25
ಶಿವಮೊಗ್ಗ: 30-22
ಬೆಳಗಾವಿ: 30-20
ಮೈಸೂರು: 28-22
ಮಂಡ್ಯ: 30-22
ಮಡಿಕೇರಿ: 26-19
ರಾಮನಗರ: 30-22
ಹಾಸನ: 28-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-21
ಕೋಲಾರ: 29-21
ತುಮಕೂರು: 29-21
ಉಡುಪಿ: 31-25
ಕಾರವಾರ: 30-24
ಚಿಕ್ಕಮಗಳೂರು: 27-19
ದಾವಣಗೆರೆ: 32-23ಹುಬ್ಬಳ್ಳಿ: 34-23
ಚಿತ್ರದುರ್ಗ: 32-23
ಹಾವೇರಿ: 32-22
ಬಳ್ಳಾರಿ: 33-23
ಗದಗ: 33-23
ಕೊಪ್ಪಳ: 32-23
ರಾಯಚೂರು: 35-23
ಯಾದಗಿರಿ: 34-23
ವಿಜಯಪುರ: 28-21
ಕಲಬುರಗಿ: 35-22
ಬಾಗಲಕೋಟೆ: 33-22





