ರಾಜ್ಯಾದ್ಯಂತ ಮುಂಗಾರು ಚುರುಕು ಪಡೆದುಕೊಂಡಿದ್ದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹವಾಮಾನ ಇಲಾಖೆ ತಿಳಿಸಿರುವಂತೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲೂ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.
Advertisement
Advertisement
Advertisement
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಇನ್ನೆರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 27-21
ಮಂಡ್ಯ: 28-21
ಕೊಡಗು: 22-18
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-21
ಕೋಲಾರ: 29-21
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-18
ದಾವಣಗೆರೆ: 28-22ಸ
ಚಿತ್ರದುರ್ಗ: 28-21
ಹಾವೇರಿ: 28-22
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 31-23
ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 31-23
ಬೀದರ್: 30-22
ಕಲಬುರಗಿ: 32-24
ಬಾಗಲಕೋಟೆ: 31-23