ರಾಜ್ಯದಲ್ಲಿ ಹಿಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ನಾಳೆ ಅಕ್ಟೋಬರ್ 24ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 30-25
ಶಿವಮೊಗ್ಗ: 30-21ಬೆಳಗಾವಿ: 30-20
ಮೈಸೂರು: 30-21
ಮಂಡ್ಯ: 30-21
ಮಡಿಕೇರಿ: 27-20
ರಾಮನಗರ: 30-21
ಹಾಸನ: 28-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-20
ಕೋಲಾರ: 29-20
ತುಮಕೂರು: 30-21
ಉಡುಪಿ: 30-25
ಕಾರವಾರ: 30-25
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಹುಬ್ಬಳ್ಳಿ: 31-21
ಚಿತ್ರದುರ್ಗ: 30-21
ಹಾವೇರಿ: 30-21
ಬಳ್ಳಾರಿ: 33-23
ಗದಗ: 32-22
ಕೊಪ್ಪಳ: 32-22
ರಾಯಚೂರು: 34-23
ಯಾದಗಿರಿ: 34-22
ವಿಜಯಪುರ: 33-22
ಕಲಬುರಗಿ: 34-22
ಬಾಗಲಕೋಟೆ: 33-22
