ರಾಜ್ಯದಲ್ಲಿ ಮಳೆ ಮತ್ತೆ ಚುರುಕಾಗಿದ್ದು, ನಾಳೆಯೂ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯ ಮುನ್ಸೂಚನೆಯೂ ಇದೆ.
ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ಜೊತೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಉತ್ತರ ಕರ್ನಾಟಕದಲ್ಲಿ ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ-ಅತಿ ಭಾರಿ ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಚಿತ್ರದುರ್ಗ, ಹಾಸನ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು. IMD ಪ್ರಕಾರ ಬೆಂಗಳೂರಿನಲ್ಲಿ ಸೆ.23ರಂದು ಗರಿಷ್ಠ 31 ಡಿಗ್ರಿ ಹಾಗೂ ಕನಿಷ್ಠ 21 ಡಿಗ್ರಿ ತಾಪಮಾನ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 31-24
ಶಿವಮೊಗ್ಗ: 29-22
ಬೆಳಗಾವಿ: 30-20
ಮೈಸೂರು: 30-21

ಮಂಡ್ಯ: 29-21
ಮಡಿಕೇರಿ: 25-19
ರಾಮನಗರ: 29-21
ಹಾಸನ: 28-20
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 28-20

ಕೋಲಾರ: 27-20
ತುಮಕೂರು: 29-20
ಉಡುಪಿ: 31-24
ಕಾರವಾರ: 34-23
ಚಿಕ್ಕಮಗಳೂರು: 27-20

ದಾವಣಗೆರೆ: 29-22
ಹುಬ್ಬಳ್ಳಿ: 29-21
ಚಿತ್ರದುರ್ಗ: 30-21
ಹಾವೇರಿ: 29-21
ಬಳ್ಳಾರಿ: 30-23
ಗದಗ: 30-22
ಕೊಪ್ಪಳ: 30-22

ರಾಯಚೂರು: 33-23
ಯಾದಗಿರಿ: 31-22
ವಿಜಯಪುರ: 29-22
ಕಲಬುರಗಿ: 30-22
ಬಾಗಲಕೋಟೆ: 30-22

