ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (IMDD) ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಜಾರಿಯಾಗಿದೆ. ಇದನ್ನೂ ಓದಿ: ಬೆಳಗಾವಿ | ಯೋಧನ ಅಂತ್ಯಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್ – ಗ್ರಾಮಸ್ಥರ ಆಕ್ರೋಶ
ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ರಾತ್ರಿಯಿಂದಶಲೇ ಮಳೆ ಸುರಿಯುತ್ತಿದ್ದು ಬೆಳಗ್ಗೆಯೂ ಮುಂದುವರಿದಿದೆ. ನಗರದ ಹಲವು ಕಡೆ ಮಳೆಯಾಗುತ್ತಿದ್ದು ಬೆಳ್ಳಂಬೆಳಗ್ಗೆ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಮೇ 22 ರಂದು ಕರ್ನಾಟಕದ ಕರಾವಳಿ ಬಳಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಹೀಗಾಗಿ ಮೇ 23ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.
ಗಾಳಿ ವೇಗ 40 ಕಿ.ಮೀ ಇರುವ ಸಾಧ್ಯತೆಯಿದ್ದು ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ಜಾರಿಯಾಗಿದ್ದು ಗುಡುಗು ಮಿಂಚು ಸಹಿತ ಜೋರು ಮಳೆಯ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ.
ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.