ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ (Karnataka) ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಇದೇ ಏಪ್ರಿಲ್ 6 ರಿಂದ ನಾಲ್ಕು ದಿನ ಸಾಧಾರಣ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ನಾನು ಸನಾತನ ವಿರೋಧಿ ಘೋಷಣೆ ಕೂಗಲ್ಲ – ಕಾಂಗ್ರೆಸ್‌ಗೆ ಗೌರವ್ ವಲ್ಲಭ್ ರಾಜೀನಾಮೆ
Advertisement
Advertisement
ಏಪ್ರಿಲ್ 6 ರಂದು ದಕ್ಷಿಣಕನ್ನಡ , ಬೀದರ್ ,ಕಲಬುರಗಿ, ಕೊಡಗು, ಮಂಡ್ಯ, ಮತ್ತು ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು
Advertisement
ಏಪ್ರಿಲ್ 7ರಂದು, ಬೆಂಗಳೂರು, ಹಾಸನ , ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದರೆ ಏಪ್ರಿಲ್ 9 ರಂದು ಕರವಾಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ 18 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಕರಾವಳಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ