ಬೆಂಗಳೂರು: ಭಾರತವನ್ನ (India) ಜಾಗತಿಕ ನಾಯಕನಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ (Narendra Modi) ಚಾಲನೆಗೊಂಡ ಏರೋ ಇಂಡಿಯಾ 2023 (Aero India 2023) ಏರ್ ಶೋ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿಗಳ ಆಶಯದಂತೆ ಕರ್ನಾಟಕ ರಾಜ್ಯವು ಈ ಕಾರ್ಯಸಾಧನೆಗೆ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ದೊಡ್ಡ ಕೊಡುಗೆ ನೀಡಲಿದೆ ಎಂದು ಹೇಳಿದರು.
Advertisement
Advertisement
ಏರೋ ಇಂಡಿಯಾ 14ನೇ ಆವೃತ್ತಿಯು ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷ ಆವೃತ್ತಿಯಾಗಿದೆ. ರಕ್ಷಣಾ ವಲಯ ಹಾಗೂ ಏರ್ ಶೋ (Air Show) ಪ್ರದರ್ಶನದಲ್ಲಿ ಭಾರತ ತನ್ನ ಸಾಮರ್ಥ್ಯವನ್ನ ನಿರೂಪಿಸಿದೆ. ಕೋವಿಡ್ ಸಂದರ್ಭದಲ್ಲಿ ಪ್ಯಾರಿಸ್ ಏರ್ ಶೋ ಸ್ಥಗಿತಗೊಂಡಾಗ, ನಮ್ಮ ಏರ್ ಶೋ ಯಶಸ್ವಿಯಾಗಿ ಜರುಗಿತ್ತು. ಈ ಬಾರಿ ವಸ್ತು ಪ್ರದರ್ಶನದ ವಿಸ್ತೀರ್ಣ ಹಾಗೂ ಪ್ರದರ್ಶಕರ ಸಂಖ್ಯೆಯೂ ಹೆಚ್ಚಾಗಿದೆ ಎಂದು ವಿವರಿಸಿದರು.
Advertisement
Advertisement
ಕರ್ನಾಟಕದಲ್ಲಿ 1940 ರಲ್ಲಿ ಹೆಚ್‌ಎಎಲ್ (HAL), 1950 ರಲ್ಲಿ ಬಿಹೆಚ್‌ಇಎಲ್ (BHEL), ಬಿಇಎಲ್ (BEL), ಡಿಆರ್‌ಡಿಒ (DRDO) ಸ್ಥಾಪನೆಗೊಂಡವು. 1960 ರಲ್ಲಿ ಇಸ್ರೋ ಕಾರ್ಯಾರಂಭ ಮಾಡಿತು. 1970ರಲ್ಲಿ `ಆರ್ಯಭಟ’ ಮೊದಲ ಉಪಗ್ರಹವನ್ನು ಬೆಂಗಳೂರಿನಲ್ಲಿ ಸಿದ್ಧಪಡಿಸಲಾಯಿತು. ಇದೀಗ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ, ರಕ್ಷಣಾ ವಲಯದ ಶೇ.65 ಉತ್ಪಾದನೆ ಬೆಂಗಳೂರಿನಲ್ಲಿ ಆಗುತ್ತಿದೆ ಎಂದು ಮಾಹಿತಿ ನೀಡಿದರು.
45 ಸಾವಿರಕ್ಕೂ ಹೆಚ್ಚು ಯುವಕರ ಬಳಕೆ: ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು, ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನ ತೊಡಗಿಸಿಕೊಳ್ಳಲಾಗುವುದು ಎಂದರು.
ಇದೇ ವೇಳೆ ಕರ್ನಾಟಕದಲ್ಲಿ 14ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ ಪ್ರಧಾನಿಗಳು ಹಾಗೂ ರಕ್ಷಣಾ ಸಚಿವರಿಗೆ ಸಿಎಂ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದು ಶ್ಲಾಘಿಸಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k