ಬೆಳಗಾವಿ: ಸ್ಯಾಂಟ್ರೋ ರವಿ, ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತುರತ್ನಗಳಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಬಿಜೆಪಿ ನಾಯಕರು ವಿರುದ್ಧ ವ್ಯಂಗ್ಯವಾಡಿದರು.
ನಗರದಲ್ಲಿ ಮಾತನಾಡಿದ ಅವರು, ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರ, ಮೂಗುತಿ ಹಾಕಿದಾಗ ಹೇಗೆ ಕಾಣ್ತಾರೋ?. ಅದೇ ರೀತಿ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎನ್ನುವ ಮೂಲಕ ಕ್ರಿಮಿನಲ್ಸ್ ಗಳನ್ನು ಹೆಣ್ಣುಮಕ್ಕಳ ಸೌಂದರ್ಯಕ್ಕೆ ಡಿಕೆಶಿ ಹೋಲಿಸಿದು. ಇದನ್ನೂ ಓದಿ: ಹಿಮದಿಂದ ಕೂಡಿದ್ದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದ ವಾಹನ – 3 ಯೋಧರು ಹುತಾತ್ಮ
Advertisement
Advertisement
ಸೈಕಲ್ ರವಿ, ಸ್ಯಾಂಟ್ರೋ ರವಿ ಮುತ್ತು ರತ್ನಗಳಿದ್ದಂತೆ, ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ. ಬಿಜೆಪಿ ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು. ಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಜನರ ಮುಂದೆ ಹೋಗುತ್ತಿದ್ದೇವೆ. ಮಹಾತ್ಮಾ ಗಾಂಧಿ (Mahatma Gandhi) 1924 ಇದೇ ಜಾಗದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟಕ್ಕೆ ಮಹಾ ಅಧಿವೇಶನ ನಡೆಸಿದ್ದರು. ವೀರಸೌಧದಿಂದಲೇ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದೇವೆ. ಸರ್ಕಾರದ ಕೊಲೆ, ಕಾಯಿಲೆ ಭ್ರಷ್ಟಾಚಾರ ತೊಳೆಯುತ್ತೇವೆ. ಇದು ಬಿ ರಿಪೋರ್ಟ್ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದರು.
Advertisement
Advertisement
ಬಿಜೆಪಿ (BJP) ಗೆ ಅಭಿವೃದ್ಧಿ ಮಾಡಲು ಸಾಕಷ್ಟು ಅವಕಾಶಗಳಿದ್ದವು. ಬಂಡವಾಳ ಆಕರ್ಷಿಸುವ, ಉದ್ಯೋಗ ಸೃಷ್ಟಿಸಲು ಅವಕಾಶ ಇತ್ತು. ಆದರೆ ಮೂರೂವರೆ ವರ್ಷದಿಂದ ಈ ಸರ್ಕಾರ ಜನರ ಶಾಪಕ್ಕೆ ಒಳಗಾಗಿದೆ. ರಾಜ್ಯಕ್ಕೆ ಅಂಟಿರುವ ಶಾಪ ನಿರ್ಮೂಲನೆ ಮಾಡಲು ಪವಿತ್ರ ಭೂಮಿಯಿಂದ ಯಾತ್ರೆ ಆರಂಭವಾಗಿದ್ದು, ಕರ್ನಾಟಕ (Karnataka) ದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿಯಾಗಿದೆ ಎಂದು ಹೇಳಿದರು.
ನಾವು ಅಧಿಕಾರಕ್ಕೆ ಬಂದರೆ ಜನರಿಗೆ ಒಳ್ಳೆಯ ಆಡಳಿತ ನೀಡುವ ಭರವಸೆ ನೀಡುತ್ತೇವೆ. ಈ ತಿಂಗಳು ರಾಜ್ಯರ ಹಲವೆಡೆ ಮೊದಲ ಹಂತದ ಯಾತ್ರೆ ನಡೆಯಲಿದೆ. ನಮ್ಮ ಯಾತ್ರೆ ಬಿಜೆಪಿ ಟೀಕೆ ಮಾಡಲಿ, ಮಾಡಬೇಕು, ನಮಗೂ ಅನುಕೂಲ ಆಗುತ್ತದೆ. ಪಾಪದ ಪುರಾಣಕ್ಕೆ ಬಿಜೆಪಿ ಈ ರಾಜ್ಯದ ಜನರಿಗೆ ಉತ್ತರ ಕೊಡಬೇಕು. ಪಾಪದ ಪುರಾಣದ ಪಟ್ಟಿ ನಮ್ಮ ಬಳಿ ಇದೆ, ಅದನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ ಎಂದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k