– ಆರಂಭಿಕ ಹಂತದಲ್ಲಿ ನಿತ್ಯ 2.5 ಲಕ್ಷ ಲೀ. ಹಾಲು ಪೂರೈಕೆ
ನವದೆಹಲಿ: ರಾಷ್ಟ್ರ ರಾಜಧಾನಿಗೆ ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯ (KMF) ನಂದಿನಿ ಹಾಲು ಲಗ್ಗೆಯಿಟ್ಟಿದೆ. ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲನ್ನು ದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಮುಂದಿನ 6 ತಿಂಗಳ ಒಳಗೆ ಪ್ರತಿನಿತ್ಯ 5 ಲಕ್ಷ ಲೀಟರ್ ಹಾಲು (Nandini Milk) ಮಾರಾಟ ಮಾಡಲು ಕೆಎಂಎಫ್ ನಿರ್ಧರಿಸಿದೆ.
ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಸೇರಿಕೊಂಡು ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ.… pic.twitter.com/tRNe3RoN3Y
— CM of Karnataka (@CMofKarnataka) November 21, 2024
Advertisement
ಹೌದು. ದೆಹಲಿಯಲ್ಲಿ ಕೆಎಂಎಫ್ ಮತ್ತು ಮಂಡ್ಯ ಹಾಲು ಒಕ್ಕೂಟಗಳು ಜಂಟಿಯಾಗಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿವೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಂದಿನಿ ಹಾಲಿನ ಉತ್ಪನ್ನಗಳನ್ನು ದೆಹಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಅಲ್ಲದೇ ದೆಹಲಿಯ ನಿವಾಸಿಗಳಿಂದ ನಂದಿನಿ ಉತ್ಪನ್ನಗಳಿಗೆ ಅತ್ಯುತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
Advertisement
ಮುಂದುವರಿದು ಮಾತನಾಡಿದ ಸಿಎಂ, ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ನಾನೂ ಕೂಡ ಪಶುಸಂಗೋಪನಾ ಸಚಿವನಾಗಿದ್ದೆ, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷನೂ ಆಗಿದ್ದೆ. ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಿದ್ದೆ ಎಂದು ಹೇಳಿದರು.
Advertisement
Advertisement
ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ.ಗೆ 32 ರೂ. ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಿದ್ದೆ. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿದ್ದು, ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್‌ಗೆ ಏರಿಸುವ ಗುರಿ ನಮ್ಮದಾಗಿದೆ ಎಂದು ಸಿಎಂ ತಿಳಿಸಿದರು.
ದೆಹಲಿಯಲ್ಲಿ ಯಾವ – ಯಾವ ಪ್ರಮಾಣದ ಹಾಲು ಲಭ್ಯ
* ಹಸುವಿನ ಹಾಲು: ಪ್ರಮುಖ ಉತ್ಪನ್ನವು 100 ಮಿಲಿ (10 ರೂ.), 500 ಮಿಲಿ (28 ರೂ.), 1 ಲೀಟರ್ (56 ರೂ.), ಮತ್ತು 6 ಲೀಟರ್ (336 ರೂ.) ಮಾದರಿಗಳು ಲಭ್ಯವಿದೆ.
* ಪೂರ್ಣ ಕೆನೆ ಹಾಲು (ಸಮೃದ್ಧಿ): ಇದರ ಬೆಲೆ 500 ಮಿಲಿ (33 ರೂ.), 1 ಲೀಟರ್ (67 ರೂ.) ಹಾಗೂ 6 ಲೀಟರ್ (402) ಮಾದರಿಗಳಿವೆ.
* ಟೋನ್ಡ್ ಹಾಲು (ಶುಭಂ): 500 ಮಿಲಿ (30 ರೂ. ) ಮತ್ತು 1 ಲೀಟರ್ (61 ರೂ.) ಮಾದರಿ.
* ತಿಳಿ ಹಾಲು (ಸಂಪೂರ್ಣ): 500 ಮಿಲಿ (27 ರೂ.) ಮತ್ತು 1 ಲೀಟರ್ (55 ರೂ.) ಪ್ರಮಾಣದ ಹಾಲಿನ ಪ್ಯಾಕೆಟ್ ಲಭ್ಯವಿರಲಿದೆ. ಇದರೊಂದಿಗೆ ಹಾಲಿನ ಇತರ ಉತ್ಪನ್ನಗಳು ಸಿಗಲಿವೆ.