ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ.
ಇದೇ ಮೊದಲ ಬಾರಿಗೆ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡುತ್ತಿದೆ. ಇದು ಕರ್ನಾಟಕದ ಜನತೆಗೆ ಹೆಮ್ಮೆಯ ಸಂಗತಿ ಎಂದು ಕೆಎಂಎಫ್ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ: ಟ್ರಾವಿಸ್ ಸ್ಪೋಟಕ ಬ್ಯಾಟಿಂಗ್ – ಡೆಲ್ಲಿ ವಿರುದ್ಧ ಹೈದರಾಬಾದ್‌ಗೆ 67 ರನ್‌ಗಳ ಭರ್ಜರಿ ಜಯ
Advertisement
Advertisement
ಈ ಕುರಿತು ಮಾತನಾಡಿರುವ ಕೆಎಂಎಫ್‌ನ ವ್ಯವಸ್ಥಾಪಕ ಎಂ.ಕೆ.ಜಗದೀಶ್, ಏ.20 ರಂದು ಒಪ್ಪಂದ ಅಧಿಕೃತಗೊಂಡಿದೆ. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ (Scotland and Ireland) ತಂಡಗಳ ಆಟಗಾರರ ಜೆರ್ಸಿಯ ತೋಳಿನ ಭಾಗದ ಮೇಲೆ ಕೆಎಂಎಫ್ ಲೋಗೋ ಇರಲಿದೆ ಎಂದು ತಿಳಿಸಿದ್ದಾರೆ.
Advertisement
ಎರಡೂ ತಂಡಗಳ ಆಟಗಾರರು ನಂದಿನಿ ಉತ್ಪನ್ನಗಳ ಜಾಹೀರಾತು, ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವ ಅಭಿಯಾನ, ಫೋಟೋಶೂಟ್‌ಗಳಲ್ಲಿ ಭಾಗವಹಿಸಲಿದ್ದಾರೆ. ವಿಶ್ವಕಪ್ ವೇಳೆ ಜಾಹೀರಾತುಗಳು ಪ್ರಸಾರಗೊಳ್ಳಲಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್ ಎಂದ ಫ್ಯಾನ್ಸ್
Advertisement
ಮಧ್ಯಪ್ರಾಚ್ಯ, ಸಿಂಗಾಪುರ, ಭೂತಾನ್, ಮ್ಯಾನ್ಮಾರ್ ಸೇರಿದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೆಎಂಎಫ್ ಅಸ್ತಿತ್ವ ಹೊಂದಿದೆ. ವಿಶ್ವಕಪ್ ವೇಳೆ ಕೆಎಂಎಫ್‌ನ ಉತ್ಪನ್ನಗಳು ಅಮೆರಿಕದಲ್ಲಿ ಲಭ್ಯವಿರಲಿದೆ ಎಂದು ತಿಳಿಸಿದ್ದಾರೆ.
T20 ಕ್ರಿಕೆಟ್ ವಿಶ್ವಕಪ್ 2024 ಜೂನ್ 1 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆತಿಥ್ಯ ವಹಿಸಲಿವೆ. ಈ ವರ್ಷದ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆಯ 20 ತಂಡಗಳಿವೆ. ಇದನ್ನೂ ಓದಿ: ರಾಹುಲ್ ಅಬ್ಬರದ ಆಟ – ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್‌ಗಳ ಭರ್ಜರಿ ಜಯ