ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ (Smart City) ಯೋಜನೆ ಕಾಮಗಾರಿಗಳು ಜೂನ್ ಒಳಗೆ ಮುಕ್ತಾಯ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ (Byrati Basavaraj) ತಿಳಿಸಿದ್ದಾರೆ.
ವಿಧಾನಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಅಬ್ದುಲ್ ಜಬ್ಬಾರ್ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳು ಪ್ರಾರಂಭವಾಗಿ 7 ವರ್ಷ ಕಳೆದರೂ ಇನ್ನೂ ಮುಗಿದಿಲ್ಲ. ಯೋಜನೆ ಯಾವಾಗ ಮುಗಿಯಲಿದೆ? ಯಾಕೆ ತಡವಾಯ್ತು ಎಂದು ಪ್ರಶ್ನೆ ಮಾಡಿದರು.
Advertisement
Advertisement
ಇದಕ್ಕೆ ಉತ್ತರ ನೀಡಿದ ಸಚಿವ ಭೈರತಿ ಬಸವರಾಜ್, ರಾಜ್ಯದಲ್ಲಿ 7 ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಜೂನ್ 2023 ಒಳಗೆ ಎಲ್ಲಾ ಕಾಮಗಾರಿ ಮುಗಿಸಲು ಕೇಂದ್ರ ಸೂಚನೆ ನೀಡಿದೆ. ಅದರಂತೆ ಜೂನ್ ವೇಳೆಗೆ ಕಾಮಗಾರಿ ಮುಗಿಯಲಿದೆ ಎಂದರು. ಇದನ್ನೂ ಓದಿ: ಬಿಜೆಪಿಯದ್ದು ತ್ರಿಬಲ್ ಎಂಜಿನ್ ಸರ್ಕಾರ.. ಇವ್ರು ಕರ್ನಾಟಕ ಉಳಿಸ್ತಾರಾ: ಹೆಚ್‌ಡಿಕೆ ಪ್ರಶ್ನೆ
Advertisement
ಒಟ್ಟು 651 ಕಾಮಗಾರಿ ನಡೆಯುತ್ತಿದೆ. ಈವರೆಗೆ 522 ಕಾಮಗಾರಿ ಪೂರ್ಣಗೊಂಡಿದೆ. 127 ಕಾಮಗಾರಿ ನಡೆಯುತ್ತಿದೆ. ಕರ್ನಾಟಕದಲ್ಲಿ ಶೇ.80 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ದೇಶದಲ್ಲಿ 3 ಸ್ಥಾನದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ನಾವು ಇದ್ದೇವೆ ಎಂದು ತಿಳಿಸಿದರು.
Advertisement
ಕೇಂದ್ರ ಸರ್ಕಾರ 3,400 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 3,500 ಕೋಟಿ ರೂ. ಬಿಡುಗಡೆ ಮಾಡಿದೆ. ಜೂನ್ 2023ರ ಒಳಗೆ ಕಾಮಗಾರಿ ಮುಗಿಸುತ್ತೇವೆ. 2-3 ಕಾಮಗಾರಿಗಳಿಗೆ ಹೆಚ್ಚುವರಿ ಸಮಯ ಕೇಳಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆ ಕಾಮಗಾರಿಗಳನ್ನು 2024ಕ್ಕೆ ಮುಕ್ತಾಯ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: DCC Bankನಲ್ಲಿ ಅಕ್ರಮ ಮಾಡಿರುವವರ ಮೇಲೆ ಕ್ರಮ ಗ್ಯಾರಂಟಿ: ಎಸ್.ಟಿ ಸೋಮಶೇಖರ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k