ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

Public TV
1 Min Read
karni sena chief murder accused Rajasthan

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ (Rashtriya Rajput Karni Sena) ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ (Sukhdev Singh Gogamedi) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಕ್ರೈಂ ಬ್ರಾಂಚ್ ಮತ್ತು ರಾಜಸ್ಥಾನ ಪೊಲೀಸರು (Rajasthan Police) ತಡರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿ ಚಂಡೀಗಢದಲ್ಲಿ (Chandigarh) ಆರೋಪಿಗಳನ್ನು ಬಂಧಿಸಿದ್ದಾರೆ. ಶೂಟರ್‌ಗಳಾದ ರೋಹಿತ್ ರಾಥೋಡ್, ನಿತಿನ್ ಫೌಜಿ ಹಾಗೂ ಸಹಚರ ಉಧಮ್ ಬಂಧಿತ ಆರೋಪಿಗಳು. ಈ ಹತ್ಯೆ ಪ್ರಕರಣದಲ್ಲಿ ಉಧಮ್ ಪಾತ್ರ ಏನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

KARNI SENA CHEIF

ದೆಹಲಿ ಪೊಲೀಸರು ರೋಹಿತ್ ಮತ್ತು ಉಧಮ್‌ನನ್ನು ದೆಹಲಿಗೆ ಕರೆತಂದಿದ್ದು, ನಿತಿನ್ ಫೌಜಿ ರಾಜಸ್ಥಾನ ಪೊಲೀಸರ ವಶದಲ್ಲಿದ್ದಾನೆ. ಈ ಹಿಂದೆ ಪ್ರಕರಣದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ನಗದು ಬಹುಮಾನವನ್ನು ಪೊಲೀಸರು ಘೋಷಿಸಿದ್ದರು.

ಆರೋಪಿಗಳು ಕೊಲೆಯ ಬಳಿಕ ತಮ್ಮ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ರಾಜಸ್ಥಾನದ ಹರಿಯಾಣದ ಹಿಸ್ಸಾರ್‌ಗೆ ತೆರಳಿದ್ದರು. ಬಳಿಕ ಹಿಮಾಚಲ ಪ್ರದೇಶದ ಮನಾಲಿಗೆ ಹೋಗಿದ್ದರು. ನಂತರ ಚಂಡೀಗಢಕ್ಕೆ ಹೋಗಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್

ಡಿಸೆಂಬರ್ 5 ರಂದು ರಾಜಸ್ಥಾನದ ಜೈಪುರದಲ್ಲಿರುವ ಗೊಗಮೆಡಿ ಅವರ ಮನೆಗೆ ನುಗ್ಗಿದ ಅಪರಿಚಿತರು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಗ್ಯಾಂಗ್ಸ್ಟರ್ ರೋಹಿತ್ ಗೋಡಾರಾ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಗೊಗಮೆಡಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ.

ಶೂಟರ್‌ಗಳು ತಲೆಮರೆಸಿಕೊಂಡಿದ್ದಾಗ ಗೋಡಾರಾನ ಆಪ್ತ ಸಹಾಯಕರಾದ ವೀರೇಂದ್ರ ಚಾಹನ್ ಮತ್ತು ದನರಾಮ್‌ನೊಂದಿಗೆ ಸಂಪರ್ಕದಲ್ಲಿದ್ದರು. ಅವರ ಸೂಚನೆಯ ಮೇರೆಗೆ ಕೊಲೆ ನಡೆಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:  ಚಿಕ್ಕಬಳ್ಳಾಪುರದಲ್ಲಿ ಅಂಡರ್‌ಪಾಸ್‌ ಗುಂಡಿಗೆ ಬಿದ್ದ ಬೆಂಗಳೂರು ಕಾರು – ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸಾವು

Share This Article