ಜೈಪುರ್: ಬಲಪಂಥೀಯ ರಜಪೂತ ಸಂಘಟನೆ ಕರ್ಣಿ ಸೇನೆಯ (Karni Sena) ರಾಜಸ್ಥಾನದ (Rajasthan) ಅಧ್ಯಕ್ಷ ಭನ್ವರ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿದೆ. ಉದಯಪುರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರ ಮೇಲೆ ವೇದಿಕೆಯಿಂದ ಕೆಳಗೆ ಬರುತ್ತಿದ್ದಂತೆ ಗುಂಡು ಹಾರಿಸಲಾಗಿದೆ.
ಗುಂಡು ಹಾರಿಸಿದ ಆರೋಪಿಯನ್ನು ಸಂಘಟನೆಯ ಮಾಜಿ ಸದಸ್ಯ ಎಂದು ಗುರುತಿಸಲಾಗಿದೆ. ಆತನನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ದೇಶಿ ನಿರ್ಮಿತ ಪಿಸ್ತೂಲನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿರುವ ಭನ್ವರ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್; ಹಾಸ್ಟೆಲ್ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್‌ಗೆ ಕಳಿಸ್ತಿದ್ದ ವಿದ್ಯಾರ್ಥಿನಿ
Advertisement
Advertisement
ಈ ಬಗ್ಗೆ ಮಾತನಾಡಿದ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಮಹಿಪಾಲ್ ಮಕ್ರಾನಾ, ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ. ಸಿಂಗ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಹಾರಿಸಿದ ಗುಂಡು ಅವರ ಬೆನ್ನಿಗೆ ತೂರಿದೆ. ವೈದ್ಯರು ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದಿದ್ದಾರೆ.
Advertisement
Advertisement
ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ಣಿ ಸೇನೆಯು ರಜಪೂತ ಮತಗಳನ್ನು ಗುರಿಯಾಗಿಸಿಕೊಂಡು ಸರಣಿ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ಆಯೋಜಿಸುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ದ್ವೇಷ – ಚಾಕುವಿನಿಂದ ಇರಿದು ನರ್ಸ್ ಹತ್ಯೆ
Web Stories