-ಗೆಲ್ಲೋದ್ಯಾರೋ, ಸೋಲೋದ್ಯಾರೋ ಲೆಕ್ಕಾಚಾರದಲ್ಲಿ ಕಾಂಚಾಣ ಝಣ..ಝಣ
ಬಾಗಲಕೋಟೆ: ಮಂಗಳವಾರ ಕರ್ನಾಟಕ ಉಪಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಅಭ್ಯರ್ಥಿಗಳಲ್ಲಿ ಫಲಿತಾಂಶ ಏನು ಬರುತ್ತೋ ಎಂಬ ಆತಂಕ ಹೆಚ್ಚಾಗಿದೆ. ಅಭ್ಯರ್ಥಿಗಳಿಂದ ಚುನಾವಣೆಯ ಫಲಿತಾಂಶದ ಲಕ್ಷ ಲಕ್ಷ ಹಣ ಹೂಡಿರುವ ಬೆಟ್ಟಿಂಗ್ ದಂಧೆಕೋರರಲ್ಲಿಯೂ ಆತಂಕ ಹೆಚ್ಚಾಗಿದೆ. ನಾಡಿನ ಜನತೆ ಫಲಿತಾಂಶ ಏನು ಆಗುತ್ತೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಇತ್ತ ಜಮಖಂಡಿ, ಮುಧೋಳ, ಬಾಗಲಕೋಟೆ ನಗರದ ಲಾಡ್ಜ್ ಗಳು, ಪಾನ್ ಶಾಪ್ ಗಳಲ್ಲಿ ಬೆಟ್ಟಿಂಗ್ ನಡೆಯುತ್ತಿದೆ.
ಈ ಬಾರಿ ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೇಗೌಡ ಮತ್ತು ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ನಡುವೆ ಸಮಬಲದ ಪೈಪೋಟಿ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬೆಟ್ಟಿಂಗ್ ಆಡುವವರ ಸಂಖ್ಯೆ ಜಿಲ್ಲೆಯಾದ್ಯಂತ ಹೆಚ್ಚಾಗುತ್ತಿದೆ. ಈ ಹಿಂದೆ ಬಾದಾಮಿ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಶ್ರೀರಾಮುಲು ಸ್ಪರ್ಧೆ ಮಾಡಿದ್ದಾಗಲೂ ಲಕ್ಷದ ಲೆಕ್ಕದಲ್ಲಿ ಬೆಟ್ಟಿಂಗ್ ನಡೆದಿತ್ತು ಎಂದು ಹೇಳಲಾಗಿತ್ತು.
ಈಗ ಪೊಲೀಸರಿಗೆ ಸುಳಿವು ನೀಡದೇ ದಂಧೆಕೋರರು ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಯಾರು ಗೆಲ್ಲುತ್ತಾರೆ? ಯಾರು ಸೋಲ್ತಾರೆ? ಎಂಬ ಸೋಲು ಗೆಲುವಿನ ಲೆಕ್ಕಾಚಾರಗಳು ಆರಂಭಗೊಂಡಿವೆ. ಅಭ್ಯರ್ಥಿಗಳ ಜೊತೆಯಲ್ಲಿ ಬೆಟ್ಟಿಂಗ್ ಹಣ ಹೂಡಿದವರಲ್ಲಿ ಫಲಿತಾಂಶ ಏನಾಗುತ್ತೆ ಎಂಬ ಆತಂಕ ಹೆಚ್ಚಾಗಿರೋದು ಸತ್ಯ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv