ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಶಂಕಿತರ ಸಂಖ್ಯೆ 32ಕ್ಕೆ ಏರಿದ್ದು, ಇಂದು ಒಂದೇ ದಿನ 19 ಮಂದಿ ದಾಖಲಾಗಿದ್ದಾರೆ.
ಗುರುವಾರ ಮೃತಪಟ್ಟ ವ್ಯಕ್ತಿ ಸೇರಿದಂತೆ ಒಟ್ಟು 6 ಮಂದಿಗೆ ಕೊರೊನಾ ಬಂದಿದ್ದು, ಇಂದು ಹೊಸದಾಗಿ ಯಾವುದೇ ಕೇಸ್ ಪತ್ತೆಯಾಗಿಲ್ಲ. 5 ಮಂದಿ ಕೊರೊನಾ ಪೀಡಿತರ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
Advertisement
Advertisement
ಕಲಬುರಗಿ, ದಕ್ಷಿಣ ಕನ್ನಡ, ಹಾಸನದಲ್ಲಿ ನಾಲ್ಕು ಮಂದಿ, ಬೆಂಗಳೂರಿನಲ್ಲಿ 3, ಉಡುಪಿಯಲ್ಲಿ 2, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ತಲಾ ಒಬ್ಬರು ದಾಖಲಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 3 ಮಂದಿ ಹಾಸನದಲ್ಲಿ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ.
Advertisement
ಒಟ್ಟು ಬೆಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ 7 ಮಂದಿ, ಉಡುಪಿಯಲ್ಲಿ 5, ಹಾಸನ ಮತ್ತು ಕಲಬುರಗಿಯಲ್ಲಿ 4 ಮಂದಿ ಮೇಲೆ ನಿಗಾ ಇಡಲಾಗಿದೆ. ಇದನ್ನೂ ಓದಿ: ಒಂದು ಆಶೀರ್ವಾದ ಕರ್ನಾಟಕ ಬಂದ್ – ಮೊದಲು ‘ನೋ’ ಎಂದ ಸಿಎಂ ‘ಓಕೆ’ ಎಂದಿದ್ದು ಯಾಕೆ?
Advertisement
ಕಲಬುರಗಿಯಲ್ಲಿ ಮೃತ ವ್ಯಕ್ತಿ ಹಲವು ಜನರನ್ನು ಸಂಪರ್ಕಿಸಿದ್ದ. ಈ ಪೈಕಿ 30 ಮಂದಿ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ. 30 ಜನರಲ್ಲಿ 4 ಮಂದಿ ಮೇಲೆ ಪ್ರತ್ಯೇಕ ನಿಗಾ ವಹಿಸಲಾಗಿದ್ದು ರಕ್ತದ ಮಾದರಿಯನ್ನು ಸಂಗ್ರಹಿಸಿದ್ದು, ಫಲಿತಾಂಶ ಬರಬೇಕಿದೆ. ಇದನ್ನೂ ಓದಿ: ಮದ್ವೆ ನಿಗದಿಯಾಗಿದ್ರೆ ಏನು ಕಥೆ? ಯಾವುದೆಲ್ಲ ಬಂದ್? ಇಲ್ಲಿದೆ ಪೂರ್ಣ ವಿವರ