ದೇವಸ್ಥಾನಗಳಲ್ಲಿ (Temple) ದೀಪ ಬೆಳಗುವ ಕಾರ್ತಿಕ ಮಾಸ ನವೆಂಬರ್ 14 ರಿಂದ ಆರಂಭವಾಗಿದೆ. ಹಿಂದೂ ಪಂಚಾಂಗದಲ್ಲಿ ಚಳಿಗಾಲದಲ್ಲಿ ಆರಂಭವಾಗುವ ಕಾರ್ತಿಕ ಮಾಸ (Karthika Masa) ಅತ್ಯಂತ ಪವಿತ್ರ ಮತ್ತು ಶ್ರೇಷ್ಠ ಮಾಸ ಎಂದು ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ದೀಪಾರಾಧನೆ ಮಾಡಿದರೆ ಐಶ್ವರ್ಯ, ಸಂಪತ್ತು, ಆರೋಗ್ಯ ಭಾಗ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಕಾರಣಕ್ಕೆ ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ತಿಕ ದೀಪೋತ್ಸವ (Karthika Deepotsava) ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ.
ಕಾರ್ತಿಕ ನಕ್ಷತ್ರ ನವೆಂಬರ್/ಡಿಸೆಂಬರ್ ತಿಂಗಳಿನಲ್ಲಿ ಚಂದ್ರನಿಗೆ ಅತ್ಯಂತ ಹತ್ತಿರಕ್ಕೆ ಬರುತ್ತದೆ. ಈ ಕಾರಣಕ್ಕೆ ಹಿಂದೂ ಪಂಚಾಂಗದ ಎಂಟನೇ ತಿಂಗಳಿಗೆ ಕಾರ್ತಿಕ ಮಾಸ ಎಂದು ಕರೆಯಲಾಗುತ್ತದೆ. ಪರಿಣಾಮವಾಗಿ ಹುಣ್ಣಿಮೆಯ ಚಂದ್ರನು ಪ್ರಕಾಶಮಾನವಾಗಿ ಕಾಣುತ್ತಾನೆ. ಅದು ನೋಡುಗರಿಗೂ ಸುಂದರ ಹಾಗೂ ಆಕರ್ಷಕವಾಗಿ ಕಾಣಿಸುತ್ತದೆ. ಪ್ರತಿ ಮಾಸಕ್ಕೆ ಒಬೊಬ್ಬ ದೇವರು ಇರುವಂತೆ ಕಾರ್ತಿಕ ಮಾಸದ ಅಧಿಪತಿ ಶಿವ. ಈ ಮಾಸದಲ್ಲಿ ಶಿವನಿಗೆ (Shiva) ದೀಪೋತ್ಸವ ನಡೆಯುವಂತೆ ವಿಷ್ಣುವಿಗೆ ತುಳಸಿ ಜೊತೆ ಕಲ್ಯಾಣವೂ ನಡೆಯುತ್ತದೆ. ಈ ಕಾರಣಕ್ಕೆ ಶಿವ ಸೇರಿದಂತೆ ವಿವಿಧ ದೇವರ ಪೂಜೆ ಮಾಡುವುದರ ಮೂಲಕ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಇದನ್ನೂ ಓದಿ: ದೀಪಾವಳಿ ವಿಶೇಷ – ಬಲಿಪಾಡ್ಯಮಿಯನ್ನು ಯಾಕೆ ಆಚರಿಸಲಾಗುತ್ತದೆ? ಏನಿದು ಪುರಾಣ ಕಥೆ?
Advertisement
Advertisement
ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿಯ೦ದು ಮಹಾವಿಷ್ಣುವು ಶಯನವನ್ನು ಪ್ರಾರ೦ಭಿಸುತ್ತಾನೆ. ನ೦ತರ ಕಾರ್ತಿಕ ಮಾಸದ ಏಕಾದಶಿಯ೦ದು ನಿದ್ದೆಯಿ೦ದ ಏಳುತ್ತಾನೆ. ಈ ದಿನವನ್ನು ʼಪ್ರಬೋಧಿನಿ ಏಕಾದಶಿʼ ಎಂದು ಕರೆಯುತ್ತಾರೆ. ಕಾರ್ತಿಕ ಮಾಸದಲ್ಲಿ ವಿಷ್ಣುವು ನಿದ್ರೆಯಿಂದ ಎಚ್ಚರಗೊಂಡು ಇಡೀ ಸೃಷ್ಟಿಯ ಮೇಲೆ ಸಂತೋಷ ಮತ್ತು ಅನುಗ್ರಹವನ್ನು ನೀಡುತ್ತಾನೆ ಎಂಬ ನಂಬಿಕೆಯಿದೆ. ಇದರೊಂದಿಗೆ ಲಕ್ಷ್ಮಿ ಕೂಡ ಈ ತಿಂಗಳು ಭೂಮಿಗೆ ಭೇಟಿ ನೀಡುತ್ತಾಳೆ. ಈ ಮಾಸದಲ್ಲಿ ಕೈಗೊಳ್ಳುವ ವ್ರತ, ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಶ್ರೇಷ್ಠತೆಯಿಂದ ಕೂಡಿದ್ದು ಹೆಚ್ಚು ಫಲ ಪ್ರಾಪ್ತಿಯಾಗುತ್ತದೆ. ಕಾರ್ತಿಕ ಮಾಸದಲ್ಲಿ ನಿಯಮ ನಿಷ್ಠೆಯಿಂದ ಉಪವಾಸವಿದ್ದು ದೇವಸ್ಥಾನಕ್ಕೆ ಹೋಗಿ ದೀಪ ಹಚ್ಚಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ. ಪ್ರತಿದಿನ ತುಳಸಿ ಗಿಡದ ಬಳಿ ದೀಪವನ್ನು ಹಚ್ಚಿದರೆ ಶುಭ. ಕಾರ್ತಿಕ ಮಾಸದಲ್ಲಿ ಜ್ಯೋತಿ ಬೆಳಗುವ ಮೂಲಕ ಮನಸ್ಸಿನಲ್ಲಿರುವ ಅಂಧಕಾರವನ್ನು ದೂರ ಮಾಡಿಕೊಳ್ಳಬಹುದು. ಇದನ್ನೂ ಓದಿ: ದೀಪಾವಳಿ: ವ್ಯಾಪಾರ ವೃದ್ಧಿಗೆ ಮಾಡಿ ಧನಲಕ್ಷ್ಮಿ ಪೂಜೆ
Advertisement
ದೇವತೆಗಳನ್ನು ಗೆದ್ದು ಪೀಡಿಸುತ್ತಿದ್ದ ತ್ರಿಪುರಾಸುರನನ್ನು ಶಿವನು ಸ೦ಹರಿಸಿ ತ್ರಿಪುರಾರಿ ಎಂದು ಕರೆಸಿಕೊಂಡ ದಿನ. ಶಿವನು ಒಂದು ಬಾಣದಿಂದ ತ್ರಿಪುರಾಸುರನನ್ನು ಸಂಹಾರ ಮಾಡಿದಾಗ ದೇವತೆಗಳು ದೀಪೋತ್ಸವ ಮಾಡಿದ್ದರು ಎಂದು ಪುರಾಣ ಕಥೆ ಹೇಳುತ್ತದೆ. ಕಾರ್ತಿಕ ಮಾಸದಲ್ಲಿ ಭೂಮಿಯ ನೀರಿಗೆ ವಿಶೇಷ ಅಯಸ್ಕಾ೦ತೀಯ ಶಕ್ತಿಯು ಬರುತ್ತದೆ. ಪ್ರಾತಃಕಾಲದಲ್ಲಿ ನದಿ, ಸಮುದ್ರ, ತೀರ್ಥ ಸ್ನಾನ ಮಾಡುವುದರಿ೦ದ ಹಲವಾರು ಕಾಯಿಲೆಗಳು ವಾಸಿಯಾಗುತ್ತದೆ ಎಂಬ ನಂಬಿಕೆಯಿದೆ.
Advertisement