ನವದೆಹಲಿ: ಅಕ್ರಮ ವೀಸಾ ನೀಡಿಕೆ ಆರೋಪದಡಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Advertisement
ಅಕ್ರಮ ವೀಸಾ ನೀಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ನ್ಯಾಯಾಲಯ ನಿನ್ನೆ ವಜಾಗೊಳಿಸಿತ್ತು. ಆ ಬಳಿಕ ಇದೀಗ ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Advertisement
Advertisement
ಪಿ. ಚಿದಂಬರಂ ಕೇಂದ್ರ ಗೃಹ ಮಂತ್ರಿಯಾಗಿದ್ದಾಗ 2011ರಲ್ಲಿ 263 ಚೀನಾ ಪ್ರಜೆಗಳಿಗೆ ವೀಸಾ ನೀಡಿದ ಆರೋಪದಲ್ಲಿ ಕಾರ್ತಿ ಚಿದಂಬರಂ ಮತ್ತು ಸಿಎ ಎಸ್.ಭಾಸ್ಕರ್ ರಾಮನ್ ಸೇರಿದಂತೆ ಮತ್ತಿತರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‍ಐಆರ್‌ನ್ನು ಪರಿಗಣಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾರ್ತಿ ನಂ.1 ಆರೋಪಿ ಎಂದು ಪ್ರಕರಣ ದಾಖಲಿಸಿಕೊಂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಹುಚ್ಚ ಆತನಿಗೆ ಯಾವ ಆಸ್ಪತ್ರೆಯಲ್ಲೂ ಔಷಧಿ ಇಲ್ಲ: ಈಶ್ವರಪ್ಪ
Advertisement