ಚಿಕ್ಕಬಳ್ಳಾಪುರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಗಡಿ ಭಾಗದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಸಂಘರ್ಷದಲ್ಲಿ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶದ (Andhra Pradesh) ಗೋರಂಟ್ಲು ತಾಲೂಕಿನ ಕಲ್ಲಿಕೊಂಡ ಗ್ರಾಮದ ಯೋಧನೊಬ್ಬ (Soldier) ಹುತಾತ್ಮರಾಗಿದ್ದಾರೆ.
ಮುರಳಿ ನಾಯಕ್ ಹುತಾತ್ಮ ಯೋಧ. ಪಾಕಿಸ್ತಾನ ಗಡಿಯಲ್ಲಿ (Pakistan Border) ನಡೆದ ದಾಳಿಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶಕ್ಕೆ ಸೇರಿದ ಕಲ್ಲಿಕೊಂಡ ಗ್ರಾಮದ ಶ್ರೀರಾಮುಲು ನಾಯಕ್ ಹಾಗೂ ಜ್ಯೋತಿಬಾಯಿ ಅವರ ಏಕೈಕ ಪುತ್ರ ಮುರಳಿ ನಾಯಕ್ ದೇಶಕ್ಕಾಗಿ ಹೋರಾಡಿ ವೀರಮರಣ ಹೊಂದಿದ್ದಾರೆ. ಮುರಳಿ ಹುತಾತ್ಮನಾಧ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಬೆಂಗಳೂರು ಪಾಕಿಸ್ತಾನದ ಹಿಟ್‌ಲಿಸ್ಟ್‌ನಲ್ಲಿ ಇದ್ಯಾ? – ಗೃಹಸಚಿವ ಪರಮೇಶ್ವರ್ ಹೇಳಿದ್ದಿಷ್ಟು…
ಹುತಾತ್ಮ ಯೋಧ ಮುರಳಿ ನಾಯಕ್ (Murali Naik) ಪಾರ್ಥೀವ ಶರೀರವನ್ನು ಇಂದು ಜಮ್ಮುವಿನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ತಂದು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಏರ್‌ಪೋರ್ಟ್‌ನ ಕಾರ್ಗೋ ಟರ್ಮಿನಲ್‌ನಲ್ಲಿ ಯೋಧರಿಂದ ಅಂತಿಮ ನಮನ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಇದನ್ನೂ ಓದಿ: ದೇಶದ ಕರೆಗೆ ಹನಿಮೂನ್ ಮೊಟಕುಗೊಳಿಸಿ ಸೇವೆಗೆ ತೆರಳಿದ ಯೋಧ
ದೇವನಹಳ್ಳಿ ಚಿಕ್ಕಬಳ್ಳಾಪುರ ಬಾಗೇಪಲ್ಲಿ ಮಾರ್ಗವಾಗಿ ಸ್ವಗ್ರಾಮದತ್ತ ಪಾರ್ಥಿವ ಶರೀರವನ್ನ ಸೇನಾ ವಾಹನದ ಸಾರಥಿಯೊಂದಿಗೆ ಅಂಬುಲೆನ್ಸ್‌ನಲ್ಲಿ ಕೊಂಡೊಯ್ಯಲಾಗುತ್ತಿದೆ. ಈ ವೇಳೆ ಚಿಕ್ಕಬಳ್ಳಾಪುರದಲ್ಲಿ ಮಳೆ ಬಂದರೂ ಜಗದ್ದೇ ದಾರಿಯಲ್ಲೇ ನಿಂತಿದ್ದ ಜನ ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದ ವಾಪಸಂದ್ರದ ಬಳಿ ಜನರು ಆಗಮಿಸಿ ಪುಷ್ಪ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ