ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಆಸ್ಪತ್ರೆಗೆ ದಾಖಲಾಗಿ ಇಂದು 12 ದಿವಸವಾಗಿದ್ದು, ಕಾವೇರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ 5 ಜನರ ನುರಿತ ವೈದ್ಯರ ತಂಡದಿಂದ ಕರುಣಾನಿಧಿಗೆ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ತನ್ನ ಮೆಡಿಕಲ್ ಬುಲೆಟಿನ್ ಬಿಡಗಡೆ ಮಾಡಿದ್ದು, ಕರುಣಾನಿಧಿ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿಸಿದೆ.
ಕಾವೇರಿ ಆಸ್ಪತ್ರೆಯ ಮುಂದೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಪೊಲೀಸ್ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದು, ಆಸ್ಪತ್ರೆಯ ಸುತ್ತಮುತ್ತ 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಜಿಲ್ಲೆಗಳ ಪೊಲೀಸ್ ಠಾಣೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಾಡುತ್ತಿದ್ದ ಮಳಿಗೆಗಳು ಬಂದ್ ಆಗಿವೆ.
Chennai: DMK workers break down after Kauvery Hospital released statement that M Karunanidhi's health has deteriorated further. pic.twitter.com/LapebJnjvi
— ANI (@ANI) August 7, 2018
Press release from Kauvery Hospital on #Kalaignar's Health. #KalaignarHealth pic.twitter.com/PzM20FnBNt
— DMK (@arivalayam) August 7, 2018