ಬದುಕಿರುವಾಗಲೇ ದಂತಕಥೆಯಂತಿದ್ದ ಕರುಣಾನಿಧಿ ಜೊತೆಗಿನ ಒಡನಾಟವನ್ನು ಹಂಚಿಕೊಂಡ ಎಚ್‍ಡಿಕೆ

Public TV
1 Min Read
KUMARASWAMY

ಬೆಂಗಳೂರು: ಬದುಕಿರುವಾಗಲೇ ದಂತಕಥೆಯಂತಿದ್ದ’ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸಧೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ ಎಂದು ಫೇಸ್‍ಬುಕ್‍ನಲ್ಲಿ ಕುಮಾರಸ್ವಾಮಿಯವರು ಬರೆದಿದ್ದಾರೆ.

ಫೇಸ್‍ಬುಕ್ ಪೋಸ್ಟ್ ನಲ್ಲಿ ಏನಿದೆ?
ಹಲವು ಬಾರಿ ಶ್ರೀ ಕರುಣಾನಿಧಿ ಅವರನ್ನು ಭೇಟಿ ಮಾಡಿದ್ದೆ. ಪ್ರಾದೇಶಿಕ ಪಕ್ಷಗಳ ಮಹತ್ವವನ್ನು ಪ್ರತಿ ಬಾರಿಯೂ ನನಗೆ ಮನವರಿಕೆ ಮಾಡಿಕೊಡುತ್ತಿದ್ದರು. ಹಿಂದುಳಿದ ವರ್ಗ ಹಾಗೂ ತುಳಿತಕ್ಕೊಳಗಾದವರ ಬಗ್ಗೆ ಅವರು ತೆಗೆದುಕೊಂಡ ಜನಪ್ರಿಯ ಯೋಜನೆಗಳನ್ನು ಇಂದು ದೇಶದ ವಿವಿಧ ರಾಜ್ಯಗಳು ಅನುಕರಿಸುತ್ತಿವೆ. ಇದನ್ನು ಓದಿ: ‘ಸಾಹಿತಿ, ಹೋರಾಟಗಾರ, ಪತ್ರಕರ್ತ, ರಾಜಕೀಯ ನಾಯಕ: ಇಲ್ಲಿದೆ ಕರುಣಾನಿಧಿ ಹೆಜ್ಜೆಗುರುತು

Kumaraswamy 1

ಹೆಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಮ್ಮಿಶ್ರ ಸರ್ಕಾರದ ರಚನೆಗೆ ಶ್ರೀ ಕರುಣಾನಿಧಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಚಿತ್ರರಂಗದ ಮೂಲಕ ರಾಜಕೀಯಕ್ಕೆ ಬಂದು ತಮಿಳುನಾಡಿನ ಶೋಷಿತ ವರ್ಗಕ್ಕೆ ಗಟ್ಟಿದನಿ ನೀಡಿದ ಕರುಣಾನಿಧಿ ಅವರ ರಾಜಕೀಯ ಸಿದ್ಧಾಂತ ನಮಗೆಲ್ಲರಿಗೂ ಮಾದರಿ.

ಅವರ ನಿಧನದಿಂದ ಭಾರತದ ರಾಜಕೀಯ ರಂಗದಲ್ಲಿ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ. ತಮಿಳುನಾಡು ಒಬ್ಬ ದಾರ್ಶನಿಕ ನಾಯಕನನ್ನು ಕಳೆದುಕೊಂಡಿದೆ.

 

Share This Article
Leave a Comment

Leave a Reply

Your email address will not be published. Required fields are marked *