-ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ
-ಕಾಲ್ತುಳಿತ ತನಿಖೆಗೆ ಸರ್ಕಾರದಿಂದ ಆಯೋಗ ರಚನೆ
ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ (Karur) ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಎಂಕೆ ಸ್ಟಾಲಿನ್ (MK Stalin) ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಲ್ತುಳಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೂ 10 ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಾಲ್ತುಳಿತದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರ ನೇತೃತ್ವದಲ್ಲಿ ಆಯೋಗ ರಚಿಸಲಾಗುವುದು ಎಂದಿದ್ದಾರೆ.ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ
ಶನಿವಾರ (ಸೆ.27) ರಾತ್ರಿ ಕರೂರಿಗೆ ಭೇಟಿ ನೀಡಿ, ಸಂತ್ರಸ್ತರ ಕುಟುಂಬಗಳನ್ನು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತೇನೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 8 ಮಕ್ಕಳು ಮತ್ತು 16 ಮಹಿಳೆಯರು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ. ಸದ್ಯ ತಿರುಚಿ, ಸೇಲಂ ಮತ್ತು ದಿಂಡಿಗಲ್ ಜಿಲ್ಲಾಧಿಕಾರಿಗಳು ಕರೂರಿಗೆ ಹೋಗಿ ಪರಿಹಾರ ಕಾರ್ಯಗಳ ಬಗ್ಗೆ ಕ್ರಮವಹಿಸಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಕಾಲ್ತುಳಿತ ಸಂಭವಿಸಿದ್ದು ಹೇಗೆ?
ನಟ ವಿಜಯ ಶನಿವಾರ (ಸೆ.27) ಮಧ್ಯಾಹ್ನದ ಹೊತ್ತಿಗೆ ಕರೂರಿಗೆ ತಲುಪಬೇಕಿತ್ತು. ಆದರೆ ಏಳು ಗಂಟೆಗಳ ಕಾಲ ತಡವಾಗಿ ಬಂದ ಕಾರಣ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿತು ಎನ್ನಲಾಗಿದೆ. ನಟ ಸ್ಥಳಕ್ಕೆ ಬರುತ್ತಿದ್ದಂತೆ ಜನರ ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದು, ಇದರಿಂದ ಜನರು ಸ್ಥಳದಲ್ಲೇ ಮೂರ್ಛೆ ಹೋಗಲಾರಂಭಿಸಿದರು. ಇದನ್ನು ಗಮನಸಿದ ನಟ ಕೂಡಲೇ ತಮ್ಮ ಭಾಷಣ ನಿಲ್ಲಿಸಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ವೇಳೆ ಬಾಟಲಿ ಎಸೆಯುತ್ತಿದ್ದ ನಟ ವಿಜಯ್ ಹತ್ತಿರಕ್ಕೆ ಜನರು ಹೋಗಲು ಪ್ರಾರಂಭಿಸಿದ್ದು, ಈ ವೇಳೆ ಒಂದು ಭಾಗದ ಜನರ ನಡುವೆ ಕಾಲ್ತುಳಿತ ಸಂಭವಿಸಿದೆ. ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್