ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಬಿಕಾ ನಗರದಲ್ಲಿ ಕಾಳಿ ನದಿಗೆ ಅಡ್ಡವಾಗಿ ಕಟ್ಟಿರುವ ಕಾಳಿ ವಿದ್ಯುತ್‍ಗಾರದ ವಿದ್ಯುತ್ ಸಂಗ್ರಹಣಾಗಾರದಲ್ಲಿ ಟ್ರಾನ್ಸ್‌ಫಾರ್ಮ್ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಹಲವು ಟ್ರಾನ್ಸ್‌ಫಾರ್ಮ್‌ಗಳು ಸಂಪೂರ್ಣ ನಾಶವಾಗಿದ್ದು, ಅದೃಷ್ಟವಶಾತ್ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಇಂಜಿನಿಯರ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾನ್ಸ್‌ಫಾರ್ಮ್‌ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಈ ಸ್ಟೋಟ ನಡೆದಿದೆ ಎನ್ನಲಾಗಿದ್ದು, ಸೋಮವಾರ ಸಂಜೆ ವೇಳೆ ಘಟನೆ ನಡೆದಿದ್ದು, ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಸ್ಫೋಟಗೊಂಡ ಮಾಹಿತಿಯನ್ನು ಗೌಪ್ಯವಾಗಿಟ್ಟಿದ್ದರು.
Advertisement
Advertisement
ಸ್ಫೋಟಗೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಈ ಹಿಂದೆ ಜೋಗಾದ ಮಹಾತ್ಮ ಗಾಂಧಿ ವಿದ್ಯುತ್‍ಗಾರದಲ್ಲಿ ಬೆಂಕಿ ಅನಾಹುತವಾಗಿ ಕೋಟಿಗಟ್ಟಲೆ ರೂ. ನಷ್ಟವಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದ್ದು, ಇದೇ ಮಾದರಿಯಲ್ಲಿ ಕಾಳಿ ವಿದ್ಯುತ್‍ಗಾರದಲ್ಲೂ ಅಗ್ನಿ ಅವಗಡ ನಡೆದಿದೆ.