ಕಾರವಾರ: ಕಾಲಿಗೆ ಸರಪಳಿ ಕಟ್ಟಿ ಗೃಹ ಬಂಧನದಲ್ಲಿರಿಸಿದ್ದ ಮಾನಸಿಕ ಅಸ್ವಸ್ಥನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ.
ಆಲೂರು ಗ್ರಾಮದ ನಿವಾಸಿ ವಿನಾಯಕ ವಸಂತ ಸೋನಶೇಟ್ ಮಾನಸಿಕ ಅಸ್ವಸ್ಥ.ಇದನ್ನೂ ಓದಿ: ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ
ವಿನಾಯಕನ ತಂದೆ ಅಂಚೆ ಇಲಾಖೆಯಲ್ಲಿ ಕೆಲಸದಲ್ಲಿದ್ದಾಗಲೇ ಮೃತಪಟ್ಟಿದ್ದರು. ಬಳಿಕ ಅನುಕಂಪದ ಆಧಾರದಡಿ ವಿನಾಯಕನಿಗೆ ಪೋಸ್ಟ್ ಮ್ಯಾನ್ ಕೆಲಸ ನೀಡಿದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ವಿನಾಯಕ ಮಾನಸಿಕ ಅಸ್ವಸ್ಥನಾಗಿದ್ದು, ತಮ್ಮ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚುತ್ತಿದ್ದ. ಹೀಗಾಗಿ ಜಮೀನಿನ ಮಧ್ಯೆ ವಾಸಕ್ಕೂ ಯೋಗ್ಯವಲ್ಲದ ಕಟ್ಟಡದಲ್ಲಿ ಕಾಲಿಗೆ ಸರಪಳಿ ಹಾಕಿ ಮಾನಸಿಕ ಅಸ್ವಸ್ಥನನ್ನು ಕುಟುಂಬದ ಸದಸ್ಯರು ಕೂಡಿ ಹಾಕಿದ್ದರು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ತಾಲೂಕಾಡಳಿತದ ಸಹಕಾರದಲ್ಲಿ ಮಂಗಳವಾರ ರಾತ್ರಿ ರಕ್ಷಣೆ ಮಾಡಿದ್ದಾರೆ. ಸದ್ಯ ಆತನನ್ನು ದಾಂಡೇಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಾನಸಿಕ ಚಿಕಿತ್ಸಾ ಆಸ್ಪತ್ರೆಗೆ ಕಳುಹಿಸಿಕೊಡುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.ಇದನ್ನೂ ಓದಿ: ಗೋವಾದಲ್ಲಿ ಇಸ್ರೇಲಿಗನ ಜೊತೆ ಪ್ರೀತಿ – 7 ವರ್ಷ ಲಿವ್‌ಇನ್, ಬಳಿಕ ಪ್ರಿಯಕರನ ಬಿಟ್ಟು ಗುಹೆ ಸೇರಿದ್ದ ರಷ್ಯಾ ಮಹಿಳೆ