ಕಾರವಾರ: ಅಕ್ರಮ ಹಣ ವರ್ಗಾವಣೆ ( Money Laundering case) ಪ್ರಕರಣದಲ್ಲಿ ಇ.ಡಿ (ED) ಅಧಿಕಾರಿಗಳು ಕಾರವಾರ ಶಾಸಕ ಸತೀಶ್ ಸೈಲ್‌ರನ್ನು (Satish Sail) ಬಂಧಿಸಿದ್ದಾರೆ. ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಬಳಿಕ ನ್ಯಾಯಮೂರ್ತಿ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಿದ್ದಾರೆ.
ಇತ್ತೀಚೆಗೆ ಅವರ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿತ್ತು. 1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿತ್ತು,
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದರು. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್ ಸೈಲ್ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದರು. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ (Belekeri Port Case) ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Congress MLA Satish Sail) ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿತ್ತು. ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ವಿಧಿಸಿರುವ ಶಿಕ್ಷೆಯನ್ನು ಹೈಕೋರ್ಟ್ (High Court) ಅಮಾನತ್ತಿನಲ್ಲಿಟ್ಟು ಆದೇಶ ಪ್ರಕಟಿಸಿತ್ತು. ಇದೀಗ ಅವರಿಗೆ ಇ.ಡಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ