ಕಾರವಾರ: ಮೀನುಗಾರಿಕೆಗೆ ತೆರಳಿ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚು ಮೀನುಗಾರರನ್ನು ಭಾರತೀಯ ತಟರಕ್ಷಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಕಾರವಾರದಿಂದ ಸುಮಾರು 10 ನಾಟಿಕಲ್ ಮೈಲು ದೂರದ ಕರ್ನಾಟಕ ಗೋವಾದ ಪೊಳೆಂ ಗಡಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯಶ್ವರ್ಧನ್ ಎಂಬ ಬೋಟ್ ತಾಂತ್ರೀಕ ದೋಷದಿಂದ ಅಪಾಯಕ್ಕೆ ಸಿಲುಕಿತ್ತು. ಸ್ಥಳೀಯ ಮೀನುಗಾರರಾದ ಘನಾಶ್ಯಾಮ್ ಎನ್ನುವವರು ಕೋಸ್ಟ್ ಗಾರ್ಡ್ ಕಚೇರಿಗೆ ಮಾಹಿತಿ ನೀಡಿ ತಕ್ಷಣ ಸಹಾಯಕ್ಕೆ ಆಗಮಿಸುವಂತೆ ಕೋರಿದ್ದರು.
ಅದರಂತೆ ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ)ನ ಐಸಿಜಿಎಸ್ ಸಿ -155 ಗಸ್ತು ಬೋಟ್ ಮೂಲಕ ಕಾರ್ಯಾಚರಣೆಗೆ ಇಳಿದ ಸಿಬ್ಬಂದ ಬೋಟ್ ನಲ್ಲಿದ್ದ 20ಕ್ಕೂ ಹೆಚ್ಚು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಹಾನಿಗೊಳಗಾದ ಮೀನುಗಾರಿಕಾ ಬೋಟ್ ನ್ನು ದಡಕ್ಕೆ ತರಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv