ಕಾರವಾರ: ನಗರಸಭೆ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಕಾರವಾರದ ಸಾಯಿ ಸೂಪರ್ ಮಾರ್ಕೆಟ್ ನ ಪರವಾನಿಗೆ ರದ್ದು ಮಾಡಲಾಗಿದೆ.
ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಅಂಗಡಿ ತೆರೆಯದಂತೆ ಕಾರವಾರ ನಗರಸಭೆ ಆದೇಶ ಹೊರಡಿಸಿತ್ತು. ಆದರೆ ಆದೇಶ ಉಲ್ಲಂಘನೆ ಮಾಡಿದ್ದಲ್ಲದೇ ದಿನಸಿ ಪದಾರ್ಥಗಳಿಗೆ ಹೆಚ್ಚಿನ ದರ ವಿಧಿಸುತ್ತಿದ್ದಾರೆ ಎಂದು ಸಾಯಿ ಸೂಪರ್ ಮಾರ್ಕೆಟ್ ವಿರುದ್ಧ ಸಾರ್ವಜನಿಕರು ನೀಡಿದ್ದರು. ಈ ಹಿನ್ನೆಲೆ ಇಂದು ನಗರಸಭೆ ಸಾಯಿ ಸೂಪರ್ ಮಾರ್ಕೆಟ್ ನ ಪರವಾನಿಗೆ ರದ್ದು ಪಡಿಸಿ ಆದೇಶ ಹೊರಡಿಸಿದೆ.
ಕಾರವಾರ ತಾಲೂಕಿನಲ್ಲಿ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿದ 179 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. 179 ಪ್ರಕರಣಗಳಿಂದ 94,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಒಂದು ವಾಹನ ಜಪ್ತಿ ಮಾಡಿ, ಎರಡು ಕರ್ಫ್ಯೂ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ.