ಕಾರವಾರ: ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ (Gokarna Sea) ನಡೆದಿದೆ.
ಮೈಸೂರು ಮೂಲದ ಅಭಿ (20) ಹಾಗೂ ಇನ್ನೋರ್ವನನ್ನು ರಕ್ಷಣೆ ಮಾಡಲಾಗಿದೆ. ರಜೆ ಹಿನ್ನೆಲೆಯಲ್ಲಿ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ಯುವಕರು ಸಮದ್ರಕ್ಕಿಳಿದು ಅಲೆಗೆ ಸಿಲುಕಿಕೊಂಡಿದ್ದರು. ಈ ವೇಳೆ ಲೈಫ್‌ಗಾರ್ಡ್ ಸಿಬ್ಬಂದಿ ಶಿವಪ್ರಸಾದ್ ಅಂಬಿಗ, ಮೋಹನ್ ಅಂಬಿಗ ಎಂಬವರು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಸಹರಾ ಮರುಭೂಮಿಯಲ್ಲಿ ಭಾರೀ ಮಳೆ – 50 ವರ್ಷದ ನಂತರ ಕೆರೆಗಳು ಭರ್ತಿ
Advertisement
Advertisement
ಇನ್ನೊಬ್ಬ ಪ್ರವಾಸಿಗ ಲೈಫ್‌ಗಾರ್ಡ್ ಸಿಬ್ಬಂದಿಗೆ ಮಾಹಿತಿ ನೀಡದೇ ಪರಾರಿಯಾಗಿದ್ದಾನೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹಣಕಾಸು ನಿರ್ವಹಣೆ ಸರಿ ಮಾಡದೇ ಕೇಂದ್ರದ ಮೇಲೆ ಗೂಬೆ: ಜೋಶಿ ವಾಗ್ದಾಳಿ
Advertisement