– ರಂಜಾನ್‍ಗೂ ಯಾವುದೇ ವಿನಾಯಿತಿ ಇಲ್ಲ
ಕಾರವಾರ: ಮೇ 3ರ ತನಕ ಭಟ್ಕಳದಲ್ಲಿ ಕಟ್ಟುನಿಟ್ಟಿನ ನಿಯಮ ಮುಂದುವರಿಯಲ್ಲಿದ್ದು, ರಂಜಾನ್ ಹಬ್ಬಕ್ಕೂ ಇದರಿಂದ ವಿನಾಯಿತಿ ಇಲ್ಲ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಇಂದು ಸಂಜೆ ಭಟ್ಕಳಕ್ಕೆ ಆಗಮಿಸಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು. ಭಟ್ಕಳದ ತಂಜೀಂ ಸಂಸ್ಥೆ ರಂಜಾನ್ ಹಬ್ಬಕ್ಕಾಗಿ ತಮಗೆ ದಿನದಲ್ಲಿ ಕನಿಷ್ಟ 2 ಗಂಟೆಯಾದರೂ ವಿನಾಯಿತಿ ನೀಡಬೇಕು ಎಂದು ಮನವಿ ಸಲ್ಲಿಸಿದ್ದರು. ಮನವಿಯನ್ನು ನಯವಾಗಿ ತಿರಸ್ಕರಿಸಿದ ಸಚಿವರು ಮೇ 3ರ ತನಕ ನಿಯಮದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಮುಸ್ಲಿಂ ಮಾತ್ರವಲ್ಲದೇ ಹಿಂದೂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಯಾವುದೇ ಧರ್ಮದ ಸಾರ್ವಜನಿಕವಾಗಿ ಧಾರ್ಮಿಕ ಹಬ್ಬಗಳ ಆಚರಣೆಗೆ ಅವಕಾಶವಿಲ್ಲ ಎಂದರು.
Advertisement
Advertisement
ಮೇ 3ರವರೆಗೂ ಈ ಹಿಂದಿನ ನಿಯಮಗಳೇ ಜಾರಿಯಲ್ಲಿರಲಿವೆ. ನಂತರದ ದಿನಗಳಲ್ಲಿ ಜಿಲ್ಲೆಯ ಮತ್ತು ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ, ರಾಜ್ಯ ಮತ್ತು ಜಿಲ್ಲೆಗಳ ಬೆಳವಣಿಗೆಗಳನ್ನು ಗಮನಿಸಿ ಚರ್ಚೆ ನಡೆಸಿ ತಿಳಿಸಲಾಗುವುದು. ಏಪ್ರಿಲ್ 26, 27ರೊಳಗೆ ನಮ್ಮ ಉತ್ತರ ಕನ್ನಡ ಜಿಲ್ಲೆ ಕೊರೊನಾ ಮುಕ್ತವಾಗಲು ಎಲ್ಲಾ ಹೋರಾಟ ನಡೆಸುತ್ತಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಕೇಳಿಕೊಂಡರು.
Advertisement
ಡಿಸ್ಚಾರ್ಜ್ ಸಮ್ಮರಿ ವಿತರಣೆ
ಭಟ್ಕಳದಲ್ಲಿ ಪತ್ತೆಯಾದ ಮೊದಲ 3 ಪ್ರಕರಣಗಳ ಸೋಂಕಿತರು ಗುಣಮುಖರಾಗಿ ಬಂದಿದ್ದು, ಅವರಿಗೆ ಸಚಿವ ಶಿವರಾಮ್ ಹೆಬ್ಬಾರ್ ಡಿಸ್ಚಾರ್ಜ್ ಸಮ್ಮರಿ ವಿತರಿಸಿ ಅಭಿನಂದಿಸಿದರು. ಮನೆಯಲ್ಲಿದ್ದು ಇತರರಲ್ಲೂ ಜಾಗೃತಿ ಮೂಡಿಸುವಂತೆ ಮನವಿ ಮಾಡಿ ಆಸ್ಪತ್ರೆಯಿಂದ ಬೀಳ್ಕೊಟ್ಟರು.
Advertisement
ಈ ವೇಳೆ ಶಾಸಕ ಸುನೀಲ್ ನಾಯ್ಕ, ಜಿ.ಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾ ಆರೋಗ್ಯಾಧಿಕಾರಿ ಅಶೋಕ ಕುಮಾರ್, ನೊಡಲ್ ಅಧಿಕಾರಿ ಡಾ. ಶರದ್ ನಾಯಕ, ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್, ಡಿಎಚ್‍ಒ ಡಾ.ಮೂರ್ತಿರಾಜ್ ಭಟ್, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಇದ್ದರು.