ಕಾರವಾರ: ಜನಪದ ಕೋಗಿಲೆ, ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅನಾರೋಗ್ಯದಿಂದ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕಾರವಾರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರನ್ನು ಐಸಿಯು ವಾರ್ಡ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ತಾಲೂಕಿನ ತಮ್ಮ ನಿವಾಸದಲ್ಲಿ ಸುಕ್ರಜ್ಜಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆಗ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
83 ವರ್ಷದ ಸುಕ್ರಿಗೌಡ ಜುಲೈ ತಿಂಗಳಿನಲ್ಲಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಐದು ದಿನಗಳ ನಂತರ ಗುಣಮುಖರಾಗಿದ್ದ ಅವರು ಡಿಸ್ಚಾರ್ಜ್ ಆಗಿ ಮನೆಗೆ ವಾಪಸ್ ಆಗಿದ್ದರು. ಈಗ ಮತ್ತೆ ಇದೇ ಸಮಸ್ಯೆ ಕಾಣಿಸಿಕೊಂಡಿದ್ದು, ಅವರಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಇದೆ. ಅವರನ್ನು ತುರ್ತು ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.