ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ (High Court Lawyer) ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪತಿ ಶಿವಕುಮಾರ್ ಕೆಎಎಸ್ ಅಧಿಕಾರಿಯಾಗಿದ್ದು, ಚೈತ್ರಾ ಹೈಕೋರ್ಟ್ ವಕೀಲೆಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಸಂಜಯ್ ನಗರ ಪೊಲೀಸ್ ಠಾಣಾ (Sanjay Nagar Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!
ಈ ಸಂಬಂಧ ಮೃತ ಚೈತ್ರಾ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್!