ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ಕಾಶ್ ಪಟೇಲ್ (Kash Patel) ಅವರಿಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI)ನ 9ನೇ ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷವೆಂದರೆ ಅಮೆರಿಕದಲ್ಲೂ ಹಿಂದೂ ಸಂಸ್ಕೃತಿ ಮರೆಯದ ಕಾಶ್ ಪಟೇಲ್ ಭಗವದ್ಗೀತೆ (Bhagavad Gita) ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದಾರೆ.
🚨🔥President Trump gives praise to Kash Patel saying he will go down as the BEST FBI Director:
“One of the reasons I loved Kash and wanted to put him in was the respect the agents had for him. I think he’ll go down as the best ever at that position.”
— Benny Johnson (@bennyjohnson) February 21, 2025
Advertisement
ಶ್ವೇತಭವನದ ಕ್ಯಾಂಪಸ್‌ನಲ್ಲಿರುವ ಐಸೆನ್‌ಹೋವರ್ ಕಾರ್ಯನಿರ್ವಾಹಕ ಕಚೇರಿ ಭವನದಲ್ಲಿ (EEOB) ಪ್ರಮಾಣ ವಚನ ಸ್ವೀಕರಿಸಿದರು. ಯುಎಸ್ ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರು ಪ್ರಮಾಣ ವಚನ ಬೋಧಿಸಿದರು. ಇದನ್ನೂ ಓದಿ: ಅಮೆರಿಕದ ಎಫ್‌ಬಿಐಗೆ ಗುಜರಾತ್ ಮೂಲದ ಕಾಶ್ ಪಟೇಲ್ ಬಾಸ್ – ನೇಮಕವಾದ ಬೆನ್ನಲ್ಲೇ ಬಿಗ್ ವಾರ್ನಿಂಗ್
Advertisement
Advertisement
ಪಟೇಲ್ ಪ್ರಮಾಣ ವಚನ ಸ್ವೀಕರಿಸುವಾಗ ಅವರ ಗೆಳತಿ ಮತ್ತು ಕುಟುಂಬ ಸದಸ್ಯರು ಅವರ ಪಕ್ಕದಲ್ಲಿ ನಿಂತಿದ್ದರು ಮತ್ತು ಕುಟುಂಬ ಇತರ ಸದಸ್ಯರು ಮುಂದಿನ ಸಾಲಿನಲ್ಲಿ ಕುಳಿತಿದ್ದರು. ಇದೀಗ ಎಫ್‌ಬಿಐನ ನಿರ್ಗಮಿತ ನಿರ್ದೇಶಕ ಕ್ರಿಸ್ಟೋಫರ್ ವ್ರೇ ಅವರ ನಂತರ ಎಫ್‌ಬಿಐನ 9ನೇ ನಿರ್ದೇಶಕರಾಗಿ ಕಾಶ್ ಪಟೇಲ್ ಮುಂದುವರಿಯಲಿದ್ದಾರೆ.
Advertisement
ಟ್ರಂಪ್ ಶ್ಲಾಘನೆ:
ಇನ್ನೂ ಕಾಶ್ ಪಟೇಲ್ ಅವರ ನೇಮಕಾತಿಯನ್ನು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ನಾನು ಕಾಶ್ ಪಟೇಲ್‌ರನ್ನ ಗೌರವಿಸುತ್ತೇನೆ. ಎಫ್‌ಬಿಐನ ಸಿಬ್ಬಂದಿ ಅವರ ಮೇಲೆ ಗೌರವ ಹೊಂದಿದ್ದರಿಂದಲೇ, ಹಾಗಾಗಿಯೇ ಅವರ ಆಯ್ಕೆಯನ್ನು ಸಮ್ಮತಿಸಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತುಂಬಾ ಅನ್ಯಾಯ: ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಟ್ರಂಪ್ ಅಪಸ್ವರ
ಪ್ರಮಾಣ ಸ್ವೀಕಾರಕ್ಕೂ ಮುನ್ನವೇ ಬಿಗ್ ವಾರ್ನಿಂಗ್:
ಎಫ್‌ಬಿಐ ನಿರ್ದೇಶಕರಾಗಿ ನೇಮಕ ಮಾಡಿ ಟ್ರಂಪ್ ಆದೇಶದ ಬೆನ್ನಲ್ಲೇ ಕಾಶ್ ಪಟೇಲ್ ತಮ್ಮ ಎಕ್ಸ್ ಖಾತೆಯಲ್ಲಿ ಎಚ್ಚರಿಕೆಯೊಂದನ್ನ ನೀಡಿದ್ದರು. ಎಫ್‌ಬಿಐ ಒಂದು ಪರಂಪರೆಯನ್ನು ಹೊಂದಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ನಮ್ಮ ನ್ಯಾಯ ವ್ಯವಸ್ಥೆಯು ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಂಡಿದೆ, ಈ ಬೆಳವಣಿಗೆ ಇಂದೇ ಕೊನೆಗೊಳ್ಳಬೇಕು. ಅಮೆರಿಕನ್ನರು (American people) ಹೆಮ್ಮೆ ಪಡುವಂತೆ ಎಫ್‌ಬಿಐ ಅನ್ನು ಮರುನಿರ್ಮಾಣ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಂಕಲ್ಪ ಮಾಡೋಣ. ಅಲ್ಲದೇ ಇದನ್ನು ನಮ್ಮ ಎಚ್ಚರಿಕೆ ಎಂದೇ ಭಾವಿಸಿ ಅಮೆರಿಕನ್ನರಿಗೆ ಹಾನಿ ಮಾಡಲು ಬಯಸುವವರು ಯಾವುದೇ ಮೂಲೆಯಲ್ಲಿದ್ದರೂ ಹುಡುಕಿ ಬೇಟೆಯಾಡುತ್ತೇವೆ ಎಂದು ಎಚ್ಚರಿಸಿದ್ದರು.
ಕಾಶ್ ಪಟೇಲ್ ಯಾರು?
ಕಾಶ್ ಪಟೇಲ್ ತಂದೆ-ತಾಯಿ ಗುಜರಾತ್ ಮೂಲದವರು. ಪಟೇಲ್ ಪೋಷಕರು ಅಮೆರಿಕದಲ್ಲಿ ನೆಲೆಸುವುದಕ್ಕಿಂತ ಮೊದಲು ಉಗಾಂಡದಲ್ಲಿದ್ದರು. ಅಲ್ಲಿಂದ ಕೆನಡಾಗೆ ಬಂದರು. ಈ ವೇಳೆ ಕಾಶ್ ಪಟೇಲ್ ತಂದೆಗೆ ಅಮೆರಿಕ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿ ಕೆಲಸ ಸಿಕ್ಕಿದ್ದರಿಂದ ಅವರು ಕುಟುಂಬ ಸಮೇತರಾಗಿ ಅಮೆರಿಕಾಗೆ ಬಂದು ನೆಲೆಸಿದರು.
ನ್ಯೂಯಾರ್ಕ್‌ನ ಗಾರ್ಡನ್ ಸಿಟಿಯಲ್ಲಿ 1980ರಲ್ಲಿ ಕಾಶ್ ಪಟೇಲ್ ಜನಿಸಿದರು. ಇಲ್ಲಿಯೇ ಅವರು ಕಾಲೇಜು ಶಿಕ್ಷಣ ಪಡೆದರು. ನಂತರ ರಿಚ್ಚಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ನಲ್ಲಿ ಪದವಿ ಪಡೆದರು. ಸಾರ್ವಜನಿಕ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ನಂತರ ಅವರು ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳಲ್ಲಿ ಕೆಲಸ ಮಾಡಿದರು. ಇದನ್ನೂ ಓದಿ: ಬೋನಿ ದಾಖಲೆ ಮುರಿಯಲು ಸಜ್ಜಾದ ಸ್ನೇಹಿತೆ – 1,000 ಪುರುಷರೊಟ್ಟಿಗೆ ಸೆಕ್ಸ್ ಮಾಡಲು ಅನ್ನಿ ನೈಟ್ ತಯಾರಿ
ಕಾಶ್ ಪಟೇಲ್ ಒಬ್ಬ ಪ್ರತಿಭಾವಂತ ವಕೀಲ, ತನಿಖಾಧಿಕಾರಿ ಹಾಗೂ ಅಮೆರಿಕದ ಹೋರಾಟಗಾರ. ಭ್ರಷ್ಟಾಚಾರವನ್ನು ಬಯಲಿಗೆಳೆಯಲು, ನ್ಯಾಯ ರಕ್ಷಿಸಲು ಹಾಗೂ ಅಮೆರಿಕದ ಜನರ ಪರವಾಗಿ ತಮ್ಮ ಜೀವನ ಸವೆಸಿ ಸುದೀರ್ಘ ಹೋರಾಟ ನಡೆಸಿದ್ದಾರೆ. ಪಟೇಲ್ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ (ಎನ್‌ಎಸ್‌ಸಿ) ಭಯೋತ್ಪಾದನಾ ನಿಗ್ರಹದ ಹಿರಿಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಹಲವಾರ ಉಗ್ರಗಾಮಿ ಸಂಘಟನೆಗಳ ಭಯೋತ್ಪಾದಕರ ಹತ್ಯೆ ಸೇರಿದಂತೆ ಅಮೆರಿಕದ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತಂದಿದ್ದಾರೆ.