ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಯೋಧನೊಬ್ಬ ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೋಕರ್‌ನಾಗ್‌ನ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರನ್ನು ಬೇಟೆಯಾಡಲು ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಬುಧವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್
Advertisement
Advertisement
ಅಂದು ನಡೆದ ಕಾರ್ಯಾಚರಣೆಯಲ್ಲಿ ಸೇನೆಯ ಇಬ್ಬರು ಮತ್ತು ಒಬ್ಬ ಪೊಲೀಸ್ ಸೇರಿದಂತೆ ಮೂವರು ಅಧಿಕಾರಿಗಳು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಇಂದು ಯೋಧರೊಬ್ಬರು ನಾಪತ್ತೆಯಾಗಿದ್ದಾರೆ.
Advertisement
ಭದ್ರತಾ ಪಡೆಗಳು ತಮ್ಮ ತೀವ್ರವಾದ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳಲ್ಲಿ ಹೆರಾನ್ ಡ್ರೋನ್‌ಗಳು ಸೇರಿದಂತೆ ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಸಾಧನಗಳನ್ನು ಬಳಸುತ್ತಿವೆ. ಇದನ್ನೂ ಓದಿ: ಕೇರಳದಲ್ಲಿ ಹೆಚ್ಚಿದ ನಿಫಾ ವೈರಸ್ ಭೀತಿ – ಕೋಝಿಕ್ಕೋಡ್‌ನ ಮದರಸಾಗಳಿಗೂ ರಜೆ ವಿಸ್ತರಣೆ
Advertisement
ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೆ.12-13 ರ ರಾತ್ರಿ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಗರೋಲ್ ಗ್ರಾಮದಲ್ಲಿ ಅಡಗಿರುವ ಕೆಲವರು ಭಯೋತ್ಪಾದಕರ ವಿರುದ್ಧ ಈ ಆಪರೇಷನ್ ಕೈಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
Web Stories