ಪಾಟ್ನಾ: 7ನೇ ತರಗತಿಯ ಪರೀಕ್ಷೆಯಲ್ಲಿ (Exam) ಕಾಶ್ಮೀರವನ್ನು (Kashmir) ಪ್ರತ್ಯೇಕ ದೇಶ ಎಂದು ಉಲ್ಲೇಖಿಸಿ, ಪ್ರಶ್ನೆಯನ್ನು (Question) ಕೇಳಿರುವ ಪತ್ರಿಕೆಯೊಂದು ಬೆಳಕಿಗೆ ಬಂದಿದೆ. ಈ ವಿಚಾರವಾಗಿ ವಿವಾದ ಉಂಟಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಪ್ರಶ್ನೆಯನ್ನು ಬಿಹಾರ ರಾಜ್ಯದ ಅರಾರಿಯಾ, ಕಿಶನ್‌ಗಂಜ್ ಮತ್ತು ಕತಿಹಾರ್‌ನಲ್ಲಿನ 7ನೇ ತರಗತಿಯ ವಿದ್ಯಾರ್ಥಿಗಳ ಮುಂದೆ ಇಡಲಾಗಿದೆ. ಇದೊಂದು ಗಂಭೀರವಾದ ವಿಚಾರವಾಗಿದ್ದು, ಪ್ರಶ್ನೆ ಪತ್ರಿಕೆ (Question Paper) ತಯಾರಿಯಲ್ಲಿ ಉನ್ನತ ಅಧಿಕಾರಿಗಳು ಶಾಮೀಲಾಗಿದ್ದರೂ ತನಿಖೆ ನಡೆಸಲಾಗುವುದು ಎಂದು ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಸಿಂಗ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್
Advertisement
Advertisement
ಪ್ರಶ್ನೆ ಪತ್ರಿಕೆಯಲ್ಲೇನಿದೆ?
ಈ ದೇಶಗಳ ಜನರನ್ನು ಏನೆಂದು ಕರೆಯುತ್ತಾರೆ ಎಂಬ ಪ್ರಶ್ನೆಯನ್ನು ಪತ್ರಿಕೆಯಲ್ಲಿ ನೀಡಲಾಗಿದೆ. ಅದರ ಕೆಳಗೆ ಚೀನಾ, ನೇಪಾಳ, ಇಂಗ್ಲೆಂಡ್, ಕಾಶ್ಮೀರ ಹಾಗೂ ಭಾರತದ ಜನರನ್ನು ಏನೆಂದು ಕರೆಯುತ್ತಾರೆ ಎಂಬ ಬಿಟ್ಟ ಸ್ಥಳದ ರೂಪದಲ್ಲಿ ಪ್ರಶ್ನೆಗಳನ್ನು ನೀಡಲಾಗಿದೆ. ಉದಾಹರಣೆಗೆ ಚೀನಾದ ಜನರನ್ನು ಚೀನೀಯರು (Chinese) ಎಂಬಂತೆ ಉತ್ತರಿಸಬೇಕು. ಆದರೆ ಕಾಶ್ಮೀರವನ್ನು ದೇಶಗಳ ಸಾಲಿನಲ್ಲಿ ನೀಡಿರುವುದಕ್ಕೆ ವಿವಾದ ಭುಗಿಲೆದ್ದಿದೆ. ಇದನ್ನೂ ಓದಿ: ಡಿಕೆಶಿ ಸ್ವಕ್ಷೇತ್ರದಲ್ಲಿ ಏಸುಕ್ರಿಸ್ತನ ಜಪ- ರೇಷನ್ ಕಾರ್ಡ್‍ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ
Advertisement
ಈ ಬಗ್ಗೆ ಸ್ಪಷ್ಟನೆ ಕೊಟ್ಟ ಮುಖ್ಯ ಶಿಕ್ಷಕ ಎಸ್‌ಕೆ ದಾಸ್, ಕಾಶ್ಮೀರದ ಜನರನ್ನು ಏನೆಂದು ಕರೆಯಬೇಕು? ಎಂಬ ಪ್ರಶ್ನೆಯನ್ನು ಕೇಳಬೇಕಿತ್ತು. ಆದರೆ ತಪ್ಪಾಗಿ ಕಾಶ್ಮೀರ ದೇಶದ ಜನರನ್ನು ಏನೆಂದು ಕರೆಯುತ್ತಾರೆ? ಎಂದು ಕೇಳಲಾಗಿದೆ. ಇದು ಮಾನವ ದೋಷ ಎಂದು ಹೇಳಿದ್ದಾರೆ.