ಶ್ರೀನಗರ: ಶೋಪಿಯಾನ್ ಜಿಲ್ಲೆಯ ಗಡಿ ಭಾಗದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ವ್ಯಾಪಾರಿ ಕಾಶ್ಮೀರಿ ಪಂಡಿತರೊಬ್ಬರಿಗೆ ಗುಂಡೇಟು ಬಿದ್ದಿದೆ.
Advertisement
ಕಾಶ್ಮೀರಿ ಪಂಡಿತ ಬಾಲ ಕೃಷ್ಣನ್ ಗಾಯಗೊಂಡಿರುವ ವ್ಯಕ್ತಿ. ಉಗ್ರರ ದಾಳಿಯಿಂದ ಬಾಲ ಕೃಷ್ಣನ್ ಕೈ ಮತ್ತು ಕಾಲುಗಳಿಗೆ ಗುಂಡುಗಳು ತಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀನಗರದಲ್ಲಿ ಉಗ್ರರ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮ
Advertisement
ಈಚೆಗಷ್ಟೇ ಶ್ರೀನಗರದ ಮೈಸುಮಾದಲ್ಲಿ ಉಗ್ರರು ದಾಳಿ ನಡೆಸಿದ ಪರಿಣಾಮ ಸಿಆರ್‌ಪಿಎಫ್ ಯೋಧ ಮೃತಪಟ್ಟಿದ್ದರು. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದರು.
Advertisement
Advertisement
ಪುಲ್ವಾಮಾದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಕೆಲವೇ ಗಂಟೆಗಳಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ದಾಳಿ ನಡೆಸಲಾಗಿತ್ತು. ಗಾಯಾಳುಗಳಿಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಬಿರ್ಭೂಮ್ ಹಿಂಸಾಚಾರ – ಮೃತರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ಕೊಟ್ಟ ಮಮತಾ ಬ್ಯಾನರ್ಜಿ