ಪಂಡಿತರಿಗೆ ಕೇಂದ್ರದಿಂದ ಗುಡ್‍ನ್ಯೂಸ್ – ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಪ್ರಾತಿನಿಧ್ಯ ನೀಡಲು ಚಿಂತನೆ

Public TV
2 Min Read
Kashmiri Pandit

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir) ವಿಧಾನಸಭೆಯಲ್ಲಿ ಕಾಶ್ಮೀರಿ ಪಂಡಿತರಿಗೆ (Kashmiri Pandit) ಪ್ರಾತಿನಿಧ್ಯ ನೀಡಲು ಕೇಂದ್ರ ಸರ್ಕಾರವು ಕಾನೂನನ್ನು ಬದಲಿಸಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಕಾಶ್ಮೀರಿ ಪಂಡಿತರನ್ನು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ (Assembly) ನಾಮನಿರ್ದೇಶನ ಮಾಡಲಾಗುವುದು. ಇದರಿಂದಾಗಿ ಅವರು ರಾಜ್ಯವನ್ನು ಅಭಿವೃದ್ಧಿ ಪಡಿಸಲು ಉತ್ತಮವಾಗಿ ಪ್ರತಿನಿಧಿಸಲ್ಪಡುತ್ತಾರೆ. ಅಷ್ಟೇ ಅಲ್ಲದೇ 3 ದಶಕಗಳಿಂದ ಕಾಶ್ಮೀರಿ ಪಂಡಿತರ ಮೇಲೆ ಆಗುತ್ತಿರುವ ಕಿರುಕುಳ ಹಾಗೂ ಆ ಸಮುದಾಯದ ರಾಜಕೀಯ ಹಕ್ಕಗಳನ್ನು ರಕ್ಷಿಸಲು ಸಹಾಯವಾಗುತ್ತದೆ ಎಂಬ ಕಾರಣದಿಂದಾಗಿ ಕೇಂದ್ರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

Kashmiri_Pandits

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆಯ ಕಾನೂನಿಗೆ ತಿದ್ದುಪಡಿಗಳನ್ನು ಸಂಸತ್ತಿನಲ್ಲಿ ತರಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಆರಂಭದಲ್ಲಿ ನಡೆದ ಪಂಡಿತರ ಮೇಲಿನ ದಾಳಿಯ ಬಳಿಕ ಈ ನಿರ್ಧಾರವನ್ನು ಕೇಂದ್ರ ತೆಗೆದುಕೊಂಡಿದೆ.

1990ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಕಣಿವೆ ರಾಜ್ಯದಲ್ಲಿ ಕ್ರೂರವಾಗಿ ದೌರ್ಜನ್ಯಗಳ ನಡೆದಿದ್ದವು. ಈ ವೇಳೆ ಅನೇಕ ಕಾಶ್ಮೀರಿ ಪಂಡಿತರು ಮೃತಪಟ್ಟಿದ್ದು, ಇನ್ನೂ ಕೆಲವರು ತಮ್ಮ ಜೀವವನ್ನು ಉಳಿಸಿಕೊಳ್ಳಲು ಕಾಶ್ಮೀರವನ್ನು ತೊರೆಯಬೇಕಾದ ಪರಿಸ್ಥಿತಿಯು ಬಂತು. ಅದಾದ ಬಳಿಕ ಕಾಶ್ಮೀರಿ ಪಂಡಿತರ ಸಮುದಾಯವು ಬಹಳ ಹಿಂದಿನಿಂದಲೂ ತಮ್ಮ ರಾಜಕೀಯ ಹಕ್ಕುಗಳನ್ನು ಸಂರಕ್ಷಿಸಲು ಹಾಗೂ ಖಾತ್ರಿ ಪಡಿಸಿಕೊಳ್ಳುವ ನಿಟ್ಟಿನಿಂದ ರಾಜ್ಯ ವಿಧಾನಸಭೆಯಲ್ಲಿ ಪ್ರಾತಿನಿಧ್ಯವನ್ನು ನೀಡಲು ಒತ್ತಾಯಿಸುತ್ತಿವೆ. ಇದನ್ನೂ ಓದಿ: ಸರ್ಕಾರಿ ವೈದ್ಯರಾಗಿ ಇತಿಹಾಸ ಬರೆದ ತೆಲಂಗಾಣದ ಇಬ್ಬರು ತೃತೀಯಲಿಂಗಿಗಳು

ಈ ಬೆನ್ನಲ್ಲೇ ಡಿಲಿಮಿಟೇಶನ್ ಆಯೋಗವು ಈ ವರ್ಷದ ಆರಂಭದಲ್ಲಿ ಕಾಶ್ಮೀರಿ ಪಂಡಿತರು ಮತ್ತು ಪಾಕ್ ಆಕ್ರಮಿತ ಕಾಶ್ಮೀರದಿಂದ ಸ್ಥಳಾಂತರಗೊಂಡವರಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಪ್ರಾತಿನಿಧ್ಯವನ್ನು ಶಿಫಾರಸು ಮಾಡಿತ್ತು. ಈ ವೇಳೆ ಕಾಶ್ಮೀರಿ ಪಂಡಿತರ ಸಮುದಾಯವು ತಮ್ಮನ್ನು ಮನೆಗಳಿಂದ ಹೊರದಬ್ಬಲಾಯಿತು. ಅಷ್ಟೇ ಅಲ್ಲದೇ ನಾವು ಹುಟ್ಟಿ ಬೆಳೆದ ದೇಶದಲ್ಲೇ ನಿರಾಶ್ರಿತರಂತೆ ಬದುಕುವ ಪರಿಸ್ಥಿತಿ ಬಂದಿದೆ ಎಂದು ಆಯೋಗಕ್ಕೆ ತಿಳಿಸಿತ್ತು. ಇದನ್ನೂ ಓದಿ: ದೆಹಲಿ ಮದ್ಯ ಹಗರಣದಲ್ಲಿ 100 ಕೋಟಿ ಕಿಕ್‌ಬ್ಯಾಕ್‌ ಆರೋಪ – ಕೆಸಿಆರ್ ಪುತ್ರಿ ಕವಿತಾಗೆ 10ಕ್ಕೂ ಹೆಚ್ಚು ಬಾರಿ ಕರೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *