ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್ ದೋಷಿ ಎಂದು ಎನ್‍ಐಎ ಕೋರ್ಟ್ ಘೋಷಿಸಿದೆ. ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಎನ್‍ಐಎ ಅಧಿಕಾರಿಗಳು ಯಾಸೀನ್ ಮಲಿಕ್ ಆರ್ಥಿಕ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲಿದ್ದು, ಶಿಕ್ಷೆಯ ಪ್ರಮಾಣದ ಬಗ್ಗೆ ಮೇ 25 ರಂದು ವಿಚಾರಣೆ ನಡೆಯಲಿದೆ. ಮೂಲಗಳ ಪ್ರಕಾರ, ಯಾಸಿನ್ ಮಲಿಕ್ ಮುಂದಿನ ವಿಚಾರಣೆಯ ದಿನಾಂಕದೊಳಗೆ ತಮ್ಮ ಹಣಕಾಸಿನ ಆಸ್ತಿಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಪೋಸ್ಟರ್‌ಗಳಲ್ಲಿ ಹುಲಿ ಚಿತ್ರಗಳನ್ನ ಹಾಕಿಬಿಟ್ರೆ ಮೈಸೂರು ಹುಲಿ ಆಗಿಬಿಡ್ತಾನಾ?: ಪ್ರತಾಪ್ ಸಿಂಹ
Advertisement
Advertisement
ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳು ಯಾಸಿನ್ ಮಲ್ಲಿಕ್ ಮೇಲೆ ದಾಖಲಾಗಿತ್ತು. ತನ್ನ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10 ರಂದು ಕೋರ್ಟ್‍ನಲ್ಲಿ ಮಲ್ಲಿಕ್ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ಪ್ರಕಟವಾಗಿದೆ. 2017 ರಲ್ಲಿ ಯಾಸೀನ್ ಮಲಿಕ್ ವಿರುದ್ಧ ದೂರು ದಾಖಲಾಗಿತ್ತು.
Advertisement
Advertisement
ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರಾದ ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ, ಶಬ್ಬೀರ್ ಶಾ, ಮಸರತ್ ಆಲಂ, ಎಂಡಿ ಯೂಸುಫ್ ಷಾ, ಅಫ್ತಾಬ್ ಅಹ್ಮದ್ ಶಾ, ಅಲ್ತಾಫ್ ಅಹ್ಮದ್ ಶಾ, ನಯೀಮ್ ಖಾನ್, ಎಂಡಿ ಅಕ್ಬರ್ ಖಾಂಡೆ, ರಾಜಾ ಮೆಹರಾಜುದ್ದೀನ್ ಕಲ್ವಾಲ್ ಸೇರಿದಂತೆ ಇತರ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರ ವಿರುದ್ಧವೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋಯ್ತು ಬೆಂಗಳೂರು -ಮೈಸೂರು ಹೆದ್ದಾರಿ – ಟ್ರಾಫಿಕ್ ಜ್ಯಾಮ್