ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮತ್ತೆ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಜಿಲ್ಲೆಯ ಸಿದ್ದಾಪುರದ ಇಬ್ಬರಲ್ಲಿ ಕಾಣಿಸಿಕೊಂಡಿದೆ.
ಸಿದ್ದಾಪುರದ (Siddapura) ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವರಲ್ಲಿ ಹಾಗೂ ಕೊರ್ಲಕೈ ಗ್ರಾಮದ 10 ವರ್ಷದ ಬಾಲಕನಲ್ಲಿ ಕೆ.ಎಫ್.ಡಿ ಪತ್ತೆಯಾಗಿದೆ. ತೀವ್ರ ಅನಾರೋಗ್ಯಕ್ಕೊಳಗಾದ 40 ವರ್ಷದ ವ್ಯಕ್ತಿಯನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಹಾಗೂ ಬಾಲಕನನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಈ ಹಿಂದೆ ಸಿದ್ದಾಪುರ ಭಾಗದಲ್ಲಿ ಮಂಗನಕಾಯಿಲೆ ಉಲ್ಭಣಗೊಂಡು ಸಾವು ಸಹ ಸಂಭವಿಸಿತ್ತು. ಇದೀಗ ಸಿದ್ದಾಪುರದಲ್ಲಿ ಮಂಗನ ಕಾಯಿಲೆ ಮತ್ತೆ ಕಾಣಿಸಿಕೊಂಡಿದ್ದು, ಹೊನ್ನಾವರ ಗಟ್ಟ ಭಾಗಕ್ಕೂ ಆತಂಕ ಪಡುವಂತಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!
Advertisement
ಹೇಗೆ ಹರಡುತ್ತದೆ?: ಕ್ಯಾಸನೂರ ಕಾಯಿಲೆ ಮೂಲತಃ ಪ್ರಾಣಿಗಳ ರೋಗವಾಗಿದ್ದು, ಮುಖ್ಯವಾಗಿ ಏಈಆಗಿ ವೈರಾಣು ಇರುವ ಉಣ್ಣಿ ಅಥವಾ ಉಣುಗು (Ticks) ಕಚ್ಚಿದಾಗ ರೋಗಕಾರಕ ವೈರಸ್‍ಗಳನ್ನು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ರೋಗಗ್ರಸ್ತ ಉಣ್ಣೆಗಳು ಮಾನವನನ್ನು ಕಚ್ಚುವುದರಿಂದ ಆಕಸ್ಮಿಕವಾಗಿ ಮಾನವನಿಗೆ ಸೋಂಕು ತಗಲುತ್ತದೆ. ಆದರೆ ಮಾನವನಿಂದ ಮಾನವನಿಗೆ ಈ ಸೋಂಕು ಹರಡುವುದಿಲ್ಲ.